Ad Widget .

ಭಾರತದ ‌ನಾಲ್ವರು ಪತ್ರಕರ್ತರಿಗೆ ಪ್ರತಿಷ್ಠಿತ ”ಪುಲಿಟ್ಜರ್ ಪ್ರಶಸ್ತಿ”

ಸಮಗ್ರ ನ್ಯೂಸ್: ಅಮೆರಿಕದ ಮಾಧ್ಯಮ, ಸಾಹಿತ್ಯ ಮತ್ತು ಸಂಗೀತ ಕ್ಷೇತ್ರದಲ್ಲಿ ನೀಡಲಾಗುವ ಪುಲಿಟ್ಜರ್ ಪ್ರಶಸ್ತಿ ಪ್ರಕಟಗೊಂಡಿದೆ. 2022ನೇ ಸಾಲಿನ ಪುಲಿಟ್ಜರ್ ಪ್ರಶಸ್ತಿ ನಾಲ್ವರು ಭಾರತೀಯರಿಗೆ ಸಿಕ್ಕಿರುವುದು ವಿಶೇಷ.

Ad Widget . Ad Widget .

ಕಳೆದ ವರ್ಷ ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಮತ್ತು ಸರಕಾರಿ ವಿಶೇಷ ಪಡೆಗಳ ಮಧ್ಯೆ ನಡೆದ ಸಂಘರ್ಷ ಘಟನೆ ವೇಳೆ ಬಲಿಯಾಗಿದ್ದ ದಾನಿಶ್ ಸಿದ್ದಿಕಿಗೆ ಮರಣೋತ್ತರ ಪ್ರಶಸ್ತಿ ಗೌರವ ಲಭಿಸಿದೆ.

Ad Widget . Ad Widget .

ಭಾರತದಲ್ಲಿ ಕೋವಿಡ್-19ನ ಚಿತ್ರಣವನ್ನು ಮನಮುಟ್ಟುವಂತೆ ಕ್ಯಾಮೆರಾದಲ್ಲಿ ಸೆರೆಹಿಡಿದದ್ದಾಗಿ ರಾಯ್ಟರ್ಸ್ ಸುದ್ದಿ ಸಂಸ್ಥೆಯ ವಿಡಿಯೋ ಜರ್ನಲಿಸ್ಟ್‌ಗಳಿಗೆ ಈ ಸಾಲಿನ ಪ್ರಶಸ್ತಿ ಸಿಕ್ಕಿದೆ. ಈ ತಂಡದಲ್ಲಿ ದಾನಿಶ್ ಸಿದ್ದಿಕಿ ಜೊತೆಗೆ ಅದ್ನಾನ್ ಅಬಿದಿ, ಸಾನ್ನಾ ಇರ್ಷದ್ ಮಟ್ಟೂ ಮತ್ತು ಅಮಿತ್ ದಾವೆ ಕೂಡ ಇದ್ದಾರೆ.

ಕಳೆದ ವರ್ಷ, ಭಾರತ ಮೂಲದ ಪತ್ರಕರ್ತೆ ಮೇಘಾ ರಾಜಗೋಪಾಲನ್‌ಗೆ 2021ನೇ ಸಾಲಿನ ಪುಲಿಟ್ಜರ್ ಪ್ರಶಸ್ತಿ ಲಭಿಸಿತ್ತು. ಚೀನಾದ ಷಿನ್‌ಜಿಯಾಂಗ್ ಪ್ರಾಂತ್ಯದಲ್ಲಿ ಮುಸ್ಲಿಮರನ್ನು ಕೂಡಿಹಾಕಲು ಬೃಹತ್ ಜೈಲುಗಳನ್ನು ನಿರ್ಮಿಸಿರುವುದರ ಬಗ್ಗೆ ಅವರ ತನಿಖಾ ವರದಿ ಗಮನ ಸೆಳೆದಿದೆ. ಇಂಥ ವಿಶೇಷ ತನಿಖಾ ವರದಿಗಳನ್ನು ಕೊಟ್ಟಿದ್ದಕ್ಕೆ ಮೇಘಾ ರಾಜಗೋಪಾಲನ್‌ಗೆ ಕಳೆದ ವರ್ಷ ಪುಲಿಟ್ಜರ್ ಗೌರವ ಪ್ರಾಪ್ತವಾಗಿತ್ತು. ಈ ವರ್ಷ ನಾಲ್ವರು ಭಾರತೀಯರಿಗೆ ಈ ಗೌರವ ಸಿಕ್ಕಿರುವುದು ವಿಶೇಷ. ಫೀಚರ್ ಫೋಟೋಗ್ರಫಿ ವಿಭಾಗದಲ್ಲಿ ಭಾರತದ ಈ ನಾಲ್ವರಿಗೆ ಪ್ರಶಸ್ತಿ ಸಂದಾಯವಾಗಿದೆ.

Leave a Comment

Your email address will not be published. Required fields are marked *