Ad Widget .

ಎಸ್ಎಸ್ಎಲ್ಸಿ ಫಲಿತಾಂಶ, ಶಾಲಾರಂಭ ಕುರಿತು ಶಿಕ್ಷಣ ಸಚಿವರಿಂದ ಮಾಹಿತಿ

ಸಮಗ್ರ ನ್ಯೂಸ್: ಶಾಲಾರಂಭ ಮತ್ತು ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಡೆಸಿದ ಹತ್ತನೇ ತರಗತಿ ಫಲಿತಾಂಶಕ್ಕೆ ಸಂಬಂಧಿಸಿದಂತೆ ಸಚಿವ ಬಿ.ಸಿ ನಾಗೇಶ್ ಮಾಹಿತಿ ನೀಡಿದ್ದಾರೆ. ಈಗಾಗಲೇ ನಿಗದಿಯಾಗಿರುವಂತೆ ಮೇ 16 ರಿಂದಲೇ ಶಾಲೆಗಳನ್ನು ಆರಂಭಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಸ್ಪಷ್ಟಪಡಿಸಿದ್ದಾರೆ..

Ad Widget . Ad Widget .

ಮೇ 16 ರಿಂದ ಶಾಲೆಗಳನ್ನು ಆರಂಭಿಸಿ ಕಲಿಕಾ ಚೇತರಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತ್ತದೆ. ಬಿಸಿಲ ಬೇಗೆ ತಾಪಮಾನ ಹೆಚ್ಚಾದ ಹಿನ್ನೆಲೆಯಲ್ಲಿ ಬೇಸಿಗೆ ರಜೆ ವಿಸ್ತರಿಸಬೇಕು. ಜೂನ್ 1 ರಿಂದ ಶಾಲೆಗಳನ್ನು ಆರಂಭಿಸಬೇಕೆಂಬ ಒತ್ತಾಯ ಕೇಳಿ ಬಂದಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಚಿವರು, ಹವಾಮಾನ ಇಲಾಖೆಯಿಂದ ಮಾಹಿತಿ ಪಡೆದುಕೊಂಡೇ 15 ದಿನಗಳ ಮೊದಲೇ ಶಾಲೆಗಳನ್ನು ಆರಂಭಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

Ad Widget . Ad Widget .

ಕೊರೋನಾ ಕಾರಣದಿಂದಾಗಿ ಮಕ್ಕಳ ಕಲಿಕಾ ಮಟ್ಟದಲ್ಲಿ ಹಿನ್ನಡೆಯಾಗಿದೆ. ಹೀಗಾಗಿ ಮೇ 16 ರಿಂದ ಶಾಲೆಗಳನ್ನು ಆರಂಭಿಸಿ ಕಲಿಕಾ ಚೇತರಿಕೆ ಕಾರ್ಯಕ್ರಮ ಆರಂಭಿಸಲಾಗುವುದು. ಮೇ 16 ರಂದು ತುಮಕೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಲಿಕಾ ಚೇತರಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ ಎಂದರು.

ಎಸ್‌ಎಸ್‌ಎಲ್ಸಿ ಫಲಿತಾಂಶದ ಬಗ್ಗೆ ಮಾಹಿತಿ ನೀಡಿದ ಸಚಿವ ನಾಗೇಶ್, ಎಸ್‌ಎಸ್‌ಎಲ್ಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಪೂರ್ಣಗೊಂಡಿದ್ದು, ಅಂಕಗಳ ಕ್ರೋಡೀಕರಣ ಮಾಡಲಾಗುತ್ತಿದೆ. ಮೇ ಮೂರನೇ ವಾರ ಎಸ್‌ಎಸ್‌ಎಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗುವುದು ಎಂದು ಹೇಳಿದ್ದಾರೆ.

Leave a Comment

Your email address will not be published. Required fields are marked *