Ad Widget .

ಲಂಕನ್ನರ ಪ್ರತಿಭಟನೆಗೆ ಬೆದರಿದ ರಾಜಪಕ್ಸ| ಕುಟುಂಬ ಸಮೇತ ನೌಕಾನೆಲೆಗೆ ಪಲಾಯನ| ಹಿಂಸಾಚಾರಕ್ಕೆ ನಲುಗಿದ ದ್ವೀಪರಾಷ್ಟ್ರ

ಸಮಗ್ರ ನ್ಯೂಸ್: ಆರ್ಥಿಕ ಬಿಕ್ಕಟ್ಟಿನಿಂದ ಕಂಗೆಟ್ಟಿರುವ ದ್ವೀಪರಾಷ್ಟ್ರ ಶ್ರೀಲಂಕಾದಲ್ಲಿ ಕರ್ಫ್ಯೂ ನಡುವೆಯೇ ಪ್ರತಿಭಟನೆ, ಹಿಂಸಾಚಾರ ತೀವ್ರಗೊಂಡಿದೆ. ಮತ್ತೊಂದೆಡೆ ಮುಂಜಾಗ್ರತಾ ಕ್ರಮವಾಗಿ ಲಂಕಾದ ಮಾಜಿ ಪ್ರಧಾನಿ ಮಹೀಂದ ರಾಜಪಕ್ಸ ಮತ್ತು ಅವರ ಕುಟುಂಬ ಸದಸ್ಯರು ನೌಕಾನೆಲೆಗೆ ಪಲಾಯನಗೈದಿರುವುದಾಗಿ ಮಾತುಗಳು ಕೇಳಿಬರುತ್ತಿವೆ.

Ad Widget . Ad Widget .

ಕೆಲವು ಮೂಲಗಳ ಪ್ರಕಾರ, ಮುಂಜಾಗ್ರತಾ ಕ್ರಮವಾಗಿ ಮಾಜಿ ಪ್ರಧಾನಿ ರಾಜಪಕ್ಷ ಮತ್ತು ಕುಟುಂಬ ಸದಸ್ಯರನ್ನು ಹೆಲಿಕಾಪ್ಟರ್ ಮೂಲಕ ನೌಕಾನೆಲೆಗೆ ಕರೆದೊಯ್ಯಲಾಗಿದೆ ಎನ್ನಲಾಗುತ್ತಿದೆ.

Ad Widget . Ad Widget .

ಈ ನಡುವೆ ಶ್ರೀಲಂಕಾದಲ್ಲಿ ನಡೆದ ಹಿಂಸಾಚಾರ, ಗಲಭೆಯಲ್ಲಿ ಈವರೆಗೆ ಸಾವನ್ನಪ್ಪಿರುವವರ ಸಂಖ್ಯೆ 08ಕ್ಕೆ ಏರಿಕೆಯಾಗಿದೆ.

Leave a Comment

Your email address will not be published. Required fields are marked *