Ad Widget .

ಐಪಿಎಸ್ ಡಾ.ಪಿ. ರವೀಂದ್ರನಾಥ್ ಮತ್ತೊಮ್ಮೆ ರಾಜೀನಾಮೆ

ಸಮಗ್ರ ನ್ಯೂಸ್: ನಿವೃತ್ತ ಐಪಿಎಸ್ ಅಧಿಕಾರಿಯೊಬ್ಬರ ವಿರುದ್ಧ ನಕಲಿ ಜಾತಿ ಪ್ರಮಾಣ ಪತ್ರ ಆರೋಪದ ವಿರುದ್ಧ ಸಮರವನ್ನೇ ಸಾರಿದ್ದಕ್ಕಾಗಿ, ಐಪಿಎಸ್ ಅಧಿಕಾರಿ ಡಾ.ಪಿ.ರವೀಂದ್ರನಾಥ್ ಅವರನ್ನು ಸರ್ಕಾರ ವರ್ಗಾವಣೆ ಮಾಡಿತ್ತು. ಈ ನಡೆಯಿಂದ ಬೇಸರಗೊಂಡಿರುವಂತ ತರಬೇತಿ ವಿಭಾಗ ಡಿಜಿಪಿ ಡಾ.ಪಿ.ರವೀಂದ್ರನಾಥ್ ತಮ್ಮ ಐಪಿಎಸ್ ಹುದ್ದೆಗೆ ರಾಜೀನಾಮೆ ನೀಡಿ ಗುಡ್ ಬೈ ಹೇಳಿದ್ದಾರೆ.

Ad Widget . Ad Widget .

ಈ ಕುರಿತು ಮಾತನಾಡಿದ ಅವರು, ನಕಲಿ ಜಾತಿ ಪ್ರಮಾಣ ಪತ್ರದಲ್ಲಿ ಸಮರವನ್ನೇ ಸಾರಿದ್ದೆ. ನಿವೃತ್ತ ಐಪಿಎಸ್ ಅಧಿಕಾರಿಯೊಬ್ಬರಿಗೆ ನೋಟಿಸ್ ಕೂಡ ನೀಡಲಾಗಿತ್ತು. ಅವರು ತಮ್ಮ ವಕೀಲರ ಮೂಲಕ ನೋಟಿಸ್ ಗೆ ಉತ್ತರ ನೀಡಿ 10 ದಿನಗಳ ಕಾಲಾವಕಾಶವನ್ನು ಕೇಳಿದ್ದರು. ಈ ಹಂತದಲ್ಲಿಯೇ ನನ್ನ ವರ್ಗಾವಣೆ ಮಾಡಿದ್ದು ಬೇಸರ ತಂದಿತ್ತು ಎಂದರು.

Ad Widget . Ad Widget .

1995ರಿಂದಲೇ ರಾಜ್ಯದಲ್ಲಿ ಎಸ್ಸಿ, ಎಸ್ಟಿ ಕಾಯ್ಜೆ ಜಾರಿಯಲ್ಲಿದೆ. ಪೊಲೀಸ್ ಇಲಾಖೆಯಲ್ಲೂ ಕಾಯ್ದೆ ಜಾರಿಗೆ ಮನವಿ ಮಾಡಿದ್ದೆ. ಆದ್ರೇ ಸರ್ಕಾರ ಮಾತ್ರ ಪದೇ ಪದೇ ಕೇಳಿದ್ರು ನಿರ್ಲಕ್ಷ್ಯ ತನ ತೋರುತ್ತಿತ್ತು. ಇದು ಬೇಸರ ತಂದಿತ್ತು. ಈ ಎಲ್ಲಾ ಕಾರಣದಿಂದಾಗಿ ಐಪಿಎಸ್ ಹುದ್ದೆಗೆ ರಾಜೀನಾಮೆ ನೀಡಿರೋದಾಗಿ ತಿಳಿಸಿದರು.

ಐಪಿಎಸ್ ಅಧಿಕಾರಿ ಡಾ.ರವೀಂದ್ರನಾಥ್ ತಮ್ಮ ಹುದ್ದೆಗೆ ರಾಜೀನಾಮೆ ನೀಡುತ್ತಿರೋದು ಇದೇನು ಮೊದಲೇನು ಅಲ್ಲ. ಈ ಹಿಂದೆ ಮೂರು ಬಾರಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು. ಈಗ ನಾಲ್ಕನೇ ಬಾರಿ ತಮ್ಮ ಐಪಿಎಸ್ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ.

Leave a Comment

Your email address will not be published. Required fields are marked *