ಉಡುಪಿ : ವಿದ್ಯಾರ್ಹತೆಗೆ ಸೂಕ್ತ ಕೆಲಸ ಸಿಗದ ಹಿನ್ನಲೆ | ಆತ್ಮಹತ್ಯೆಗೆ ಶರಣಾದ ಯುವತಿ

ಸಮಗ್ರ ನ್ಯೂಸ್: 23 ವರ್ಷದ ಎಂಬಿಎ ಪದವೀಧರೆ, ಮಂಗಳೂರಿನ ಪ್ರತಿಷ್ಠಿತ ಕಾಲೇಜಿನಲ್ಲಿ ಒಂದೂವರೆ ವರ್ಷದ ಹಿಂದೆಯೇ ಎಂಬಿಎ ಪದವಿ ಮುಗಿಸಿದ್ದಳು. ತನ್ನ ವಿದ್ಯಾರ್ಹತೆಗೆ ಸೂಕ್ತ ಕೆಲಸ ಸಿಗಲಿಲ್ಲವೆಂದು ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿ ಜಿಲ್ಲೆಯ ಶಿರ್ವ ಸಮೀಪದ ಕಟ್ಟಿಂಗೇರಿ ಗ್ರಾಮದಲ್ಲಿ ನಡೆದಿದೆ.

Ad Widget ... ..

ದ.ಕ ಜಿಲ್ಲೆ ಉಪ್ಪಿನಂಗಡಿ ಮೂಲದ ಸಹನಾ ಆತ್ಮಹತ್ಯೆ ಮಾಡಿಕೊಂಡ ಮೃತ ದುರ್ದೈವಿ. ಏಪ್ರಿಲ್ 30 ರಂದು ಸಹೋದರಿ ಸೌಮ್ಯ ಅವರ ಮನೆಗೆ ಬಂದಿದ್ದು ಅಲ್ಲೇ ರಾತ್ರಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ,

Ad Widget

ಆಕೆಯನ್ನು ಉಡುಪಿಯಲ್ಲಿರುವ ಮಿಷನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ರವಾನಿಸಲಾಗಿದೆ. ಮೇ 9 ರಂದು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಈ ಸಂಬಂಧ ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *