ಸಮಗ್ರ ನ್ಯೂಸ್: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಎಲ್ಲ ಬಿಪಿಎಲ್ ಕುಟುಂಬಗಳಿಗೆ ನೀಡುತ್ತಿದ್ದ ಉಚಿತ ವಿದ್ಯುತ್ ಪ್ರಮಾಣವನ್ನು 40 ಯುನಿಟ್‌ನಿಂದ 75 ಯುನಿಟ್‌ಗೆ ಹೆಚ್ಚಿಸುವ ಮಹತ್ವದ ನಿರ್ಧಾರವನ್ನು ರಾಜ್ಯ ಸರಕಾರ ತೆಗೆದುಕೊಂಡಿದೆ. ಇದರಿಂದ ಇಂಧನ ಇಲಾಖೆಗೆ ವಾರ್ಷಿಕ 979 ಕೋಟಿ ರೂ. ಹೆಚ್ಚುವರಿ ಹೊರೆ ಬೀಳಲಿದ್ದು, ಇದೇ ತಿಂಗಳಿಂದ ಯೋಜನೆಯ ಲಾಭ ಫಲಾನುಭವಿಗಳಿಗೆ ಲಭ್ಯವಾಗಲಿದೆ.
ಭಾಗ್ಯಜ್ಯೋತಿ ಹಾಗೂ ಕುಟಿರ ಜ್ಯೋತಿ ಯೋಜನೆ ವ್ಯಾಪ್ತಿಯಲ್ಲಿ ಬರುವವರೂ ಸೇರಿದಂತೆ ಪರಿಶಿಷ್ಟ ಜಾತಿ ಹಾಗೂ ಪಂಗಡದ ಫಲಾನುಭವಿಗಳ ಮನೆಯಲ್ಲಿ ಇನ್ನು ಮುಂದೆ ವಿದ್ಯುತ್ “ನಿರಂತರ”ವಾಗಲಿದೆ.