Ad Widget .

41ನೇ ವಸಂತಕ್ಕೆ ಕಾಲಿಟ್ಟ ಸನ್ನಿ ಲಿಯೋನ್| ಅಭಿಮಾನಿಗಳಿಂದ ಶುಭಾಶಯದ ಮಹಾಪೂರ|

ಸಮಗ್ರ ನ್ಯೂಸ್: ಬಾಲಿವುಡ್ ನಟಿ, ಮಾದಕ ತಾರೆ ಸನ್ನಿ ಲಿಯೋನ್ ಅವರು ಇಂದು (ಮೇ.13) 41ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ನೆಚ್ಚಿನ ನಟಿಯ ಹುಟ್ಟುಹಬ್ಬದ ಅಂಗವಾಗಿ ಚಿತ್ರರಂಗದ ಗಣ್ಯರು ಸೇರಿದಂತೆ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಶುಭ ಹಾರೈಸಿದ್ದಾರೆ.

Ad Widget . Ad Widget .

ಇಂಟರ್ನೆಟ್‌ನಲ್ಲಿ ತಮ್ಮ ಮಾದಕ ಭಂಗಿಗಳ ಮೂಲಕ ನೋಡುಗರ ಎದೆಯಲ್ಲಿ ಕಿಚ್ಚು ಹಚ್ಚುವ ಕಲೆಯನ್ನು ಸನ್ನಿ ಚೆನ್ನಾಗಿಯೇ ಕರಗತ ಮಾಡಿಕೊಂಡಿದ್ದಾರೆ. ಪ್ರವಾಸ, ಫೋಟೊಶೂಟ್‌, ಹೊಸ ಉಡುಪು ಹಾಗೂ ಇನ್ನಿತರ ವಿಚಾರಗಳಿಗೆ ಸಂಬಂಧಿಸಿದ ಚಿತ್ರಗಳು, ವಿಡಿಯೊ ತುಣುಕುಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳುವ ಮೂಲಕ ಅವರು ತಮ್ಮ ಅಭಿಮಾನಿಗಳೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿರುತ್ತಾರೆ.

Ad Widget . Ad Widget .

ನೀಲಿತಾರೆಯಾಗಿ‌ ಚಿತ್ರಜಗತ್ತಿಗೆ ಪರಿಚಯವಾದ ಸನ್ನಿ ಬಳಿಕ ಹಾಲಿವುಡ್, ಬಾಲಿವುಡ್ ನಲ್ಲಿ ಹೊಸ ಟ್ರೆಂಡ್ ಕ್ರಿಯೇಟ್ ಮಾಡಿದ್ದಾರೆ. ‘ಜಿಸ್ಮ್’ ಮೂಲಕ‌ ಬಾಲಿವುಡ್ ಗೆ ಕಾಲಿಟ್ಟ ಸನ್ನಿ ಬಳಿಕ ಹಲವು ಚಿತ್ರಗಳಲ್ಲಿ ನಟಿಸಿದರು.

ಬಿಬಿಸಿ ಪಟ್ಟಿ ಮಾಡಿದ್ದ ವಿಶ್ವದ 100 ಅತ್ಯಂತ ಪ್ರಭಾವಿ ಮಹಿಳೆಯರಲ್ಲಿ ಸನ್ನಿ ಲಿಯೋನ್ ಕೂಡ ಒಬ್ಬರು. ಆಕೆಯ ಜೊತೆಗೆ ಇತರೆ ನಾಲ್ವರು ಭಾರತೀಯ ಮಹಿಳೆಯರು ಆ ಪಟ್ಟಿಯಲ್ಲಿದ್ದರು.

ಸನ್ನಿ ಲಿಯೋನ್- ಡೇನಿಯಲ್ ವೆಬರ್ ದಂಪತಿ ಹೆಣ್ಣು ಮಗುವನ್ನು ದತ್ತು ಪಡೆದುಕೊಂಡಿದ್ದಾರೆ. ಆಕೆಗೆ ನಿಶಾ ಕೌರ್ ವೆಬರ್ ಎಂದು ಹೆಸರಿಟ್ಟಿದ್ದಾರೆ. ಸನ್ನಿ -ವೆಬರ್ ದಂಪತಿಗೆ ಇಬ್ಬರು ಗಂಡು ಮಕ್ಕಳಿದ್ದಾರೆ.

Leave a Comment

Your email address will not be published. Required fields are marked *