Ad Widget .

ವಕೀಲೆ ಮೇಲೆ ನಡುರಸ್ತೆಯಲ್ಲೇ ಹಲ್ಲೆ| ಪೊಲೀಸರಿಗೆ ಮನೆ ತೋರಿಸಿದ್ದಕ್ಕೆ ಹಿಗ್ಗಾಮುಗ್ಗ ಥಳಿತ

ಸಮಗ್ರ ನ್ಯೂಸ್: ಪೊಲೀಸರಿಗೆ ಮನೆ ತೋರಿಸಿದರು ಎಂಬ ಕಾರಣಕ್ಕೆ ಪಕ್ಕದ ಮನೆಯವರ ಜೊತೆ ವಕೀಲೆ ಮೇಲೆ ನಡುರಸ್ತೆಯಲ್ಲೇ ಹಲ್ಲೆ ನಡೆಸಿ ಹಿಗ್ಗಾಮುಗ್ಗ ಥಳಿಸಿರುವ ಘಟನೆ ಬಾಗಲಕೋಟೆಯ ವಿನಾಯಕ ನಗರದಲ್ಲಿ ಸಂಭವಿಸಿದೆ.

Ad Widget . Ad Widget .

ಜಗಳದಲ್ಲಿ ವಕೀಲೆ, ಕುಟುಂಬಸ್ಥರು ಹಾಗೂ ಇನ್ನೋರ್ವ ವ್ಯಕ್ತಿ ಮಧ್ಯೆ ಮಾರಾಮಾರಿ ನಡೆದಿದೆ. ಈ ವೇಳೆ ವಕೀಲೆ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದ್ದು, ಗಾಯಾಳುಗಳನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಮಾಂತೇಶ ಚೊಳಚಗುಡ್ಡ ಎಂಬ ವ್ಯಕ್ತಿ ವಕೀಲೆ ಸಂಗೀತಾ ಶಿಕ್ಕೇರಿ ಮೇಲೆ ಹಲ್ಲೆ ನಡೆಸಿದ್ದಾರೆ.

Ad Widget . Ad Widget .

ನನ್ನ ಪತಿ ಹಾಗೂ ನನ್ನ ಮೇಲೆ ಮಾರಣಾಂತಿಕ ಹಲ್ಲೆ ಆಗಿದೆ ಎಂದು ವಕೀಲೆ ಸಂಗೀತಾ ಶಿಕ್ಕೇರಿ ಆರೋಪಿಸಿದ್ದಾರೆ. ವಿನಾಯಕ ನಗರದ ನಿವಾಸಿ ಮಹಾಂತೇಶ್ ಚೊಳಚಗುಡ್ಡ ಹಲ್ಲೆ ಮಾಡಿರುವುದಾಗಿ ಆರೋಪ ಕೇಳಿಬಂದಿದೆ. ಕಾಲು ಎದೆ ಭಾಗ, ತಲೆಗೆ ಪೆಟ್ಟಾಗಿದೆ. ನನ್ನ ಪತಿಗೆ ಕಿವಿ ಹಾಗೂ ತಲೆಗೆ ಗಾಯವಾಗಿದೆ. ಬಿಜೆಪಿ ಮುಖಂಡ ರಾಜು ನಾಯ್ಕರ್ ಕುಮ್ಮಕ್ಕಿನಿಂದ ಮಹಾಂತೇಶ ಚೊಳಚಗುಡ್ಡ ಹಲ್ಲೆ ಮಾಡಿದ್ದಾರೆ ಎಂದು ವಕೀಲೆ ದೂರಿದ್ದಾರೆ.

https://m.facebook.com/story.php?story_fbid=pfbid033n8w4zBv5GpE5G2grEsZu7rT3kvK7kAdfNxSWrpqhFugsH6GmjnNb6hdgzehXcWQl&id=100046281591879&sfnsn=wiwspmo

ಘಟನೆಯ ಹಿನ್ನಲೆಯೇನು?
ಬಾಗಲಕೋಟೆಯ ವಿನಾಯಕ ನಗರದ 3 ನೇ ಕ್ರಾಸ್​ನಲ್ಲಿರುವ ವಕೀಲೆ ಸಂಗೀತಾ ಶಿಕ್ಕೇರಿ ಮನೆಯ ಕಂಪೌಂಡ್​ನ ಜೆಸಿಬಿಯಿಂದ ಬೆಳಗಿನ ಜಾವ ಧ್ವಂಸ ಮಾಡಲಾಗಿದೆ. ಸಂಗೀತಾ ದೊಡ್ಡಪ್ಪ ಹನುಮಂತ ಶಿಕ್ಕೇರಿ ಅವರಿಂದ ಈ ಕೃತ್ಯ ನಡೆದಿದೆ ಎಂಬ ಆರೋಪ ಕೇಳಬಂದಿದೆ. ಸಂಗೀತಾ ಶಿಕ್ಕೇರಿ ತಾಯಿ ಶಾರದಾ ಶಿಕ್ಕೇರಿ, ಶುವಿತಾ ಶಿಕ್ಕೇರಿ ಹಾಗೂ ಹನುಮಂತ ಶಿಕ್ಕೇರಿ ಎಂಬುವರ ಮಧ್ಯೆ ವಿವಾದ ಇತ್ತು. ಬಾಗಲಕೋಟೆ ಜಿಲ್ಲಾ ನ್ಯಾಯಾಲಯದಲ್ಲಿ ಹಾಗೂ ದೆಹಲಿ ಸುಪ್ರೀಮ್ ಕೋರ್ಟ್​ನಲ್ಲಿ ಮನೆ ವಿವಾದ ವಿಚಾರಣಾ ಹಂತದಲ್ಲಿತ್ತು. ಬಾಗಲಕೋಟೆ ಹಿರಿಯ ನ್ಯಾಯಾಧೀಶರು ಯಥಾ ಸ್ಥಿತಿ ಕಾಪಾಡುವಂತೆ ಸ್ಟೇ ಇದೆ. ಸ್ಟೇ ಇದ್ದಾಗಲೂ ಕೃತ್ಯ ಎಸಗಿದ್ದಾರೆ ಎಂದು ಸಂಗೀತಾ ಆರೋಪಿಸಿದ್ದಾರೆ. ವಿದ್ಯುತ್ ಕಟ್ ಮಾಡಿಸಿ ನೀರು ಸರಬರಾಜು ಬಂದ್ ಮಾಡಿಸಿ ಮನೆ ಕಂಪೌಂಡ್ ಕೆಡವಿದ್ದಾರೆ ಎಂದು ದೊಡ್ಡಪ್ಪ ಹನುಮಂತ ಶಿಕ್ಕೇರಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

Leave a Comment

Your email address will not be published. Required fields are marked *