Ad Widget .

ಕಡಬ: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಸ್ವಲ್ಪದರಲ್ಲೇ ಪಾರು

ಸಮಗ್ರ ನ್ಯೂಸ್: ಚಲಿಸುತ್ತಿರುವ ಕಾರಿಗೆ ಏಕಾಏಕಿ ಬೆಂಕಿ ಹತ್ತಿಕೊಂಡ ಕಾರಣ ಕಾರು ಸಂಪೂರ್ಣ ಬೆಂಕಿಗಾಹುತಿಯಾದ ಘಟನೆ ಕಡಬ ತಾಲೂಕಿನ ಕೊಂಬಾರು ಗ್ರಾಮದಲ್ಲಿ ಮೇ.14 ರ ರಾತ್ರಿ ನಡೆದಿದೆ.

Ad Widget . Ad Widget .

ಕೊಂಬಾರು ಗ್ರಾಮದ ಪೆರುಂದೋಡಿ ಕಟ್ಟೆ ಎಂಬಲ್ಲಿ ಘಟನೆ ನಡೆದಿದ್ದು ಝೈಲೋ ಕಾರು ಬೆಂಕಿಗಾಹುತಿಯಾಗಿದೆ. ಪಟ್ರಮೆ ನಿವಾಸಿ ಆನಂದ ಗೌಡ ಎಂಬವರು ಕುಟುಂಬ ಸದಸ್ಯರ ಜತೆಗೆ ಸಂಬಂಧಿಕರಾದ ಕೊಂಬಾರು ಕಟ್ಟೆ ಸೋಮಪ್ಪ ಗೌಡ ಎಂಬವರ ಮನೆಗೆ ಬರುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

Ad Widget . Ad Widget .

ಕಾರು ಪೆರುಂದೋಡಿ ಕಟ್ಟೆ ತಲುಪುತ್ತಲೇ ಕಾರಿನಲ್ಲಿ ಹೊಗೆ ಕಾಣಿಸಿಕೊಂಡು ಬಳಿಕ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ. ಬೆಂಕಿಯ ತೀವ್ರತೆ ಹೆಚ್ಚಾಗುತ್ತಲೇ ಕಾರಿನಲ್ಲಿದ್ದವರು ಇಳಿದಿದ್ದು ಓರ್ವರಿಗೆ ಸಣ್ಣ ಗಾಯವಾಗಿದೆ ಎಂದು ತಿಳಿದು ಬಂದಿದೆ ಕಾರಿನಲ್ಲಿ ಇಬ್ಬರು ಗಂಡಸರು, ಮಗು ಹಾಗು ಓರ್ವ ಮಹಿಳೆ ಪ್ರಯಾಣಿಸುತ್ತಿದ್ದರು, ಎಲ್ಲರು ಪ್ರಾಣಾಪಯದಿಂದ ಪಾರಾಗಿದ್ದಾರೆ.

ಕಾರಿನಲ್ಲಿ ಬೆಂಕಿಕಾಣಿಸಿಕೊಳ್ಳುತ್ತಲೇ ಕಾರಿನಲ್ಲಿದ್ದವರು ಪುತ್ತೂರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಇಕ್ಕಟ್ಟಿನ ರಸ್ತೆ ಮತ್ತು ಅಗಲ ಕಿರಿದಾದ ಸೇತುವೆಯ ಮೂಲಕ ಅಗ್ನಿಶಾಮಕ ದಳ ಘಟನಾ ಸ್ಥಳಕ್ಕೆ ತಲುಪುವ ವೇಳೆಗಾಗಲೇ ಕಾರಿನ ಬಹುತೇಕ ಭಾಗಗಳು ಸಂಪೂರ್ಣ ಹೊತ್ತಿ ಉರಿದು ಹೋಗಿತ್ತು.

Leave a Comment

Your email address will not be published. Required fields are marked *