ತ್ರಿಪುರಾ ಮುಖ್ಯಮಂತ್ರಿಯಾಗಿ ಮಾಣಿಕ್ ಸಹಾ ಅಧಿಕಾರ ಸ್ವೀಕಾರ

ಸಮಗ್ರ ನ್ಯೂಸ್: ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ಮುನ್ನ ಮಾಣಿಕ್ ಸಹಾ ಅವರು ರವಿವಾರ ತ್ರಿಪುರಾದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

Ad Widget ... ..

ಬಿಪ್ಲಬ್ ಕುಮಾರ್ ದೇಬ್ ಅವರು ಶನಿವಾರ ರಾಜೀನಾಮೆ ನೀಡಿದ ನಂತರ ಸಹಾ ಅವರನ್ನು ಸಿಎಂ ಅಭ್ಯರ್ಥಿಯಾಗಿ ಆಯ್ಕೆ ಮಾಡಲಾಗಿತ್ತು.ದೇಬ್ ಈಗ ಬಿಜೆಪಿ ತ್ರಿಪುರಾ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಳ್ಳುವ ಸಾಧ್ಯತೆಯಿದೆ.

Ad Widget

ಸಹಾ ಲಕ್ನೋದ ಕಿಂಗ್ ಜಾರ್ಜ್ ವೈದ್ಯಕೀಯ ಕಾಲೇಜಿನ ಸರ್ಜನ್. ಅವರು 2016 ರಲ್ಲಿ ಬಿಜೆಪಿಗೆ ಸೇರುವ ಮೊದಲು ಪ್ರತಿಪಕ್ಷ ಕಾಂಗ್ರೆಸ್‌ನ ಸದಸ್ಯರಾಗಿದ್ದರು. 2020 ರಲ್ಲಿ ಬಿಜೆಪಿಯ ತ್ರಿಪುರಾ ಘಟಕದ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸಿದ್ದರು. ಪ್ರಸ್ತುತ ರಾಜ್ಯಸಭಾ ಸದಸ್ಯರಾಗಿದ್ದಾರೆ.

Leave a Comment

Your email address will not be published. Required fields are marked *