Ad Widget .

ಮೇ.16ರಿಂದ ಶಾಲಾರಂಭ| ಶೈಕ್ಷಣಿಕ ಚಟುವಟಿಕೆಗಳಿಗೆ ಚಾಲನೆ| ಶಾಲೆಗೆ ಹೊರಡಲಿದ್ದಾರೆ ಚಿಣ್ಣರು

ಸಮಗ್ರ ನ್ಯೂಸ್: ಕೋವಿಡ್‌ನಿಂದಾಗಿ ಕಳೆದ ಎರಡೂವರೆ ವರ್ಷಗಳಲ್ಲಿ ಶಾಲೆಗಳಲ್ಲಿ ಸರಿಯಾಗಿ ಭೌತಿಕ ತರಗತಿಗಳು ನಡೆದಿಲ್ಲ. ವಿದ್ಯಾರ್ಥಿಗಳು ಸಹ ಶೈಕ್ಷಣಿಕವಾಗಿ ಬಹಳ ಹಿಂದೆ ಉಳಿದಿದ್ದಾರೆ. ಇದರಿಂದಾಗಿ 2022-23 ನೇ ಶೈಕ್ಷಣಿಕ ವರ್ಷವನ್ನು ಮೇ 16ರಿಂದ ಪ್ರಾರಂಭಿಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ.

Ad Widget . Ad Widget .

ನಾಳೆ(ಮೇ 16) ಸೋಮವಾರ ಕಲಿಕಾ ಚೇತರಿಕೆ ಕಾರ್ಯಕ್ರಮ ಆರಂಭವಾಗಲಿದ್ದು ಮಕ್ಕಳನ್ನು ಬಹಳ ಸಂತೋಷದಿಂದ ಬರಮಾಡಿಕೊಳ್ಳಲು ಸರ್ಕಾರಿ ಶಾಲೆಗಳಲ್ಲಿ ಸಿಹಿ ಖಾದ್ಯವನ್ನು ನೀಡಲು ಶಿಕ್ಷಣ ಇಲಾಖೆ ಸೂಚಿಸಿದೆ.

Ad Widget . Ad Widget .

ಮಕ್ಕಳು ಶಾಲೆಗೆ ಬರುವುದು ಸಂಭ್ರಮದ ಕ್ಷಣ. ಮೊದಲ ಸಲವಂತು ಶಾಲೆಗೆ ಕಾಲಿಡುತ್ತಿರುವ ವಿದ್ಯಾರ್ಥಿಗಳಿಗೆ ಶಾಲೆ ದೇವಸ್ಥಾನ. ಮಕ್ಕಳು ಶಾಲೆಗೆ ಬರುವಾಗ ಸಂತೋಷದಿಂದ ಬರಬೇಕು. ಮಕ್ಕಳನ್ನು ಸಂಭ್ರಮದಿಂದ ಸ್ವಾಗತಿಸಲು ಸಿಹಿಯನ್ನು ಹಂಚಬೇಕು ಎಂದು ಅಗತ್ಯ ವ್ಯವಸ್ಥೆ ಮಾಡಲಾಗಿದೆ.

ಸಿಹಿಖಾದ್ಯಗಳನ್ನು ಮಾಡಿ ಮಕ್ಕಳಿಗೆ ವಿತರಿಸಲು ಶಿಕ್ಷಣ ಇಲಾಖೆ ಸಜ್ಜಾಗಿದೆ. ಶಾಲೆಯ ಮುಖ್ಯ ಶಿಕ್ಷಕರು ಸ್ಥಳೀಯ ಜನಪ್ರತಿನಿಧಿಗಳು ಶಾಲೆಗೆ ಶ್ರಮದಾನ ಮೂಲಕ ಸರ್ಕಾರಿ ಶಾಲೆಯ ಅಭಿವೃದ್ದಿಯ ಜೊತೆ ಮಕ್ಕಳನ್ನು ಶಾಲೆಗೆ ಖುಷಿಯಂದ ಬರುವಂತೆ ನೋಡಿಕೊಳ್ಳುವ ಸಲುವಾಗಿ ಇಲಾಖೆ ಸಿಹಿ ವಿತರಣೆಯನ್ನು ಮಾಡುತ್ತಿದೆ.

ಕಲಿಕಾ ಚೇತರಿಕೆಯ ಚೇತರಿಕೆಯ ವರ್ಷ;
ಮಕ್ಕಳನ್ನು ಶಾಲೆಗೆ ಬರಮಾಡಿಕೊಳ್ಳುವುದಲ್ಲದೇ ಇಡೀ ವರ್ಷವನ್ನು ಕಲಿಕಾ ಚೇತರಿಕ ವರ್ಷವನ್ನಾಗಿ ಇಲಾಖೆ ಘೋಷಣೆಯನ್ನು ಮಾಡಿದೆ. ಕಲಿಕಾ ಚೇತರಿಕೆಯ ಕಾರ್ಯಕ್ರಮದಲ್ಲಿ ಏನನ್ನು ಮಾಡಬೇಕು ಎಂಬ ಯೋಜನೆಯನ್ನು ಶಿಕ್ಷಣ ಇಲಾಖೆ ಹಾಕಿಕೊಂಡಿದೆ.

ಕಲಿಕಾ ಚೇತರಿಕೆ ಕಾರ್ಯಕ್ರಮವನ್ನು ಅನುಷ್ಟಾನ ಮಾಡುವ ಜವಾಬ್ದಾರಿಯನ್ನು ಡಿಡಿಪಿಐ ಮತ್ತು ಬಿಇಒಗಳಿಗೆ ನೀಡಲಾಗಿದೆ. ಈ ಶೈಕ್ಷಣಿಕ ವರ್ಷ ಮೇ 16 ರಿಂದ ಪ್ರಾರಂಭವಾಗಲಿದ್ದು ವಿದ್ಯಾರ್ಥಿಗಳ ಕಲಿಕಾ ನ್ಯೂನ್ಯತೆಯನ್ನು ಸರಿದೂಗಿಸುವ ಸಲುವಾಗಿ ಹಮ್ಮಿಕೊಂಡಿರುವ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವ ಯೋಜನೆ ಹಾಕಿಕೊಳ್ಳಲಾಗದೆ.

ಶಾಲಾ ಹಂತದಲ್ಲಿ ನಡೆಯಲಿರುವ ಕಲಿಕಾ ಚೇತರಿಕೆಯ ಮಾಹಿತಿಯನ್ನು ಸಿಆರ್ ಪಿಗಳ ಮೂಲಕ ತರಿಸಿಕೊಂಡು ಡಿಡಿಪಿಐ ಮತ್ತು ಬಿಇಒಗಳು ಪರಿಶೀಲಿಸಲಿದ್ದಾರೆ. ಎರಡು ಶೈಕ್ಷಣಿಕ ವರ್ಷ ವಿದ್ಯಾರ್ಥಿಗಳ ಕೌಶಲ್ಯವನ್ನೇ ಕಸಿದುಕೊಂಡಿದೆ. ಇದರಿಂದಾಗಿ ಕಲಿಕಾ ಚೇತರಿಕೆಯ ಕಾರ್ಯಕ್ರಮದ ಮಹತ್ವವನ್ನು ಪೋಷಕರಿಗೆ ಮನವರಿಕೆ ಮಾಡಿಕೊಡುವ ಮೂಲಕ ವಿದ್ಯಾರ್ಥಿಗಳನ್ನು ಶಾಲೆಯ ಕೊಠಡಿಗಳಿಗೆ ಬರುವಂತೆ ಮಾಡುವುದು ಹಾಗೂ ಮಕ್ಕಳ ಕಲಿಕೆಯ ನ್ಯೂನ್ಯತೆಯನ್ನು ಪತ್ತೆ ಮಾಡಿ ಉತ್ತಮ ಶಿಕ್ಷಣವನ್ನು ನೀಡಬೇಕಾಗಿದೆ.

ಇನ್ನು ಮೇ 16 ರಿಂದ ಶಾಲೆಗಳು ಪ್ರಾರಂಭವಾಗಲಿವೆ ಎಂದು ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ತಿಳಿಸಿದ್ದು ಸರ್ವರು ಶಾಲೆಗೆ ಬನ್ನಿ, ಮಕ್ಕಳನ್ನು ಕರೆತನ್ನಿ ಎಂದು ಕೋರಿದ್ದಾರೆ.

Leave a Comment

Your email address will not be published. Required fields are marked *