ಕರಾವಳಿಯಲ್ಲಿ ಮೇ.19ರವರೆಗೆ ಭಾರೀ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಹಿನ್ನಲೆಯಲ್ಲಿ ಮೀನುಗಾರರು ಸಮುದ್ರ ಮತ್ತು ನದಿಗೆ ಇಳಿಯದಂತೆ ಮುನ್ಸೂಚನೆ ನೀಡಲಾಗಿದೆ.

Ad Widget ... ..

ಉಡುಪಿ ಹಾಗೂ ದ.ಕನ್ನಡ ಜಿಲ್ಲೆಗಳಲ್ಲಿ ಈ ಕುರಿತು ಅಲರ್ಟ್ ಘೋಷಣೆ ಮಾಡಲಾಗಿದ್ದು, ಮೇ 17 ಮತ್ತು 19ರಂದು ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಮೇ 18ರಂದು ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದ್ದು, ಗಾಳಿ‌ ಸಹಿತ ಭಾರೀ‌ ಮಳೆಯಾಗುವ ಸಂಭವವಿದೆ.

Ad Widget

ರಾಜ್ಯದಲ್ಲಿ ಹಿಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಮುಂಗಾರು ಆರಂಭಕ್ಕೂ ಮುನ್ನವೇ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ.

ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯಂತೆ ಮೇ 16ರಿಂದ 19ರವರೆಗೆ “ಎಲ್ಲೋ ಅಲರ್ಟ್‌’ ಘೋಷಿಸಲಾಗಿದ್ದು, ಈ ವೇಳೆ ಬಿರುಸಿನಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ.

Leave a Comment

Your email address will not be published. Required fields are marked *