ಭಾರೀ ಮಳೆ ಸಾಧ್ಯತೆ; ಮುಂದಿನ 4 ದಿನ ಅಲರ್ಟ್

ಸಮಗ್ರ ನ್ಯೂಸ್: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು,ರಾಜ್ಯದಲ್ಲಿ‌ ಮೇ 18 ರಿಂದ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Ad Widget ... ..

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಮತ್ತು ಹಾಸನದಲ್ಲಿ ಮೇ 16, 17ರಂದು ಗುಡುಗು ಮಿಂಚು ಸಹಿತ ಧಾರಾಕಾರ ಮಳೆ ಬೀಳುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

Ad Widget

ಅಲ್ಲದೆ, ಮೇ,18,19ರಂದು ಈ ಜಿಲ್ಲೆಗಳಲ್ಲಿ ಇನ್ನಷ್ಟು ಹೆಚ್ಚು ಮಳೆ ಬೀಳಲಿದ್ದು, ಆರೆಂಜ್ ಅಲರ್ಟ್ ಘೋಷಿಸಿದೆ.

ಬೆಂಗಳೂರು, ಬೆಂ.ಗ್ರಾಮಾಂತರ, ರಾಮನಗರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರ, ಚಿತ್ರದುರ್ಗ, ಬಳ್ಳಾರಿ ಮತ್ತು ದಾವಣಗೆರೆಯಲ್ಲಿ ಮುಂದಿನ 4 ದಿನ, ಬೀದರ್,ವಿಜಯಪುರ, ರಾಯಚೂರು, ಕಲಬುರಗಿ, ರಾದಗಿರಿ, ಕೊಪ್ಪಳ,ಗದಗ, ಹಾವೇರಿ, ಬಾಗಲಕೋಟೆ ಮತ್ತು ಬೆಳಗಾವಿಯಲ್ಲಿ ಮುಂದಿನ 48 ಗಂಟೆ ಯೆಲ್ಲೋ ಅಲರ್ಟ್ ನೀಡಲಾಗಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

Leave a Comment

Your email address will not be published. Required fields are marked *