Ad Widget .

ದತ್ತಪೀಠದ ಬಳಿ ಬಿರಿಯಾನಿ ಬಾಡೂಟ| ಹಿಂದೂ ಸಂಘಟನೆಗಳ‌ ಆಕ್ರೋಶ

ಸಮಗ್ರ ನ್ಯೂಸ್: ಚಂದ್ರದ್ರೋಣ ಪರ್ವತಶ್ರೇಣಿಯಲ್ಲಿರುವ ಬಾಬಾಬುಡನ್​ಗಿರಿಯ ಶ್ರೀಗುರುದತ್ತಾತ್ರೇಯ ಪೀಠದ ಸ್ಥಳ ಮತ್ತೆ ಚರ್ಚೆಗೆ ಕಾರಣವಾಗಿದೆ. ದತ್ತಪೀಠದ ಹೋಮ-ಹವನ ನಡೆಯುವ ಜಾಗದಲ್ಲಿ ಮಾಂಸಹಾರ ಮಾಡಿರೋದು ಸದ್ಯ ಹಿಂದೂಪರ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ.

Ad Widget . Ad Widget .

ವಿವಾದಿತ ಜಾಗದಲ್ಲಿ ಕೋರ್ಟ್ ಆದೇಶ ಉಲ್ಲಂಘನೆ ಮಾಡಿರುವ ಸಮುದಾಯದ ಕೆಲವರು ಹೋಮ-ಹವನ ನಡೆಯುವ ಸ್ಥಳದಲ್ಲಿ ತಾತ್ಕಾಲಿಕ ಶೆಡ್ ಹಾಕಿ ಮಾಂಸಹಾರ ತಯಾರಿಸಿದ್ದಾರೆ. ಅಲ್ಲದೇ ದತ್ತಪೀಠದ ಗೋರಿಗಳಿಗೆ ಪೂಜೆ ಮಾಡಿದ್ದಾರೆ ಎಂದು ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಆರೋಪ ಮಾಡಿದ್ದಾರೆ. ಹೋಮ-ಹವನ ನಡೆಯುವ ಸ್ಥಳದಲ್ಲಿ ಬಿರಿಯಾನಿ ತಯಾರು ಮಾಡಲು ಅವಕಾಶ ನೀಡಿದಕ್ಕೆ ಮುಜರಾಯಿ ಇಲಾಖೆ ಅಧಿಕಾರಿಗಳ ವಿರುದ್ಧ ಹಿಂದೂ ಪರ ಸಂಘಟನೆಗಳು ತೀವ್ರ ಆಕ್ರೋಶ ಹೊರಹಾಕಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *