Ad Widget .

ಮತಾಂತರ ನಿಷೇಧ ಕಾಯ್ದೆಗೆ ರಾಜ್ಯಪಾಲರಿಂದ ಅಂಕಿತ| ಇನ್ಮುಂದೆ ಬಲವಂತದ ಮತಾಂತರಕ್ಕೆ ಬ್ರೇಕ್

ಸಮಗ್ರ ನ್ಯೂಸ್: ಸುಗ್ರೀವಾಜ್ಞೆ ಮೂಲಕ ಜಾರಿಗೆ ಮಾಡಿದ್ದ ಮತಾಂತರ ನಿಷೇಧ ಕಾಯ್ದೆಗೆ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್ ಅಂತಿಮ ಮುದ್ರೆ ಒತ್ತಿದ್ದಾರೆ. ಇಂದಿನಿಂದ ರಾಜ್ಯದಲ್ಲಿ ಕಾನೂನು ಜಾರಿಗೆ ಬರಲಿದೆ.

Ad Widget . Ad Widget .

ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆಯನ್ನ ಪಾಸ್‌ ಮಾಡಿತ್ತು. ಇದಕ್ಕೆ ರಾಜ್ಯಪಾಲರು ಅಂಕಿತ ಹಾಕಿದ್ದರಿಂದ ಕಾನೂನು ಈಗ ರಾಜ್ಯದಲ್ಲಿ ಜಾರಿಗೆ ಬರಲಿದೆ. ಈ ಮೂಲಕ ಕರ್ನಾಟಕವು ಮತಾಂತರ ವಿರೋಧಿ ಕಾನೂನನ್ನು ಜಾರಿಗೆ ತಂದ 9ನೇ ರಾಜ್ಯವಾಗಿದೆ.

Ad Widget . Ad Widget .

ಈ ವಿವಾದಾತ್ಮಕ ಕಾನೂನು ‘ಬಲಪ್ರಯೋಗ, ವಂಚನೆ, ಅನಗತ್ಯ ಪ್ರಭಾವ, ಬಲಾತ್ಕಾರ, ಆಮಿಷ ಅಥವಾ ವಿವಾಹದ ಮೂಲಕ ಒಂದು ಧರ್ಮದಿಂದ ಮತ್ತೊಂದು ಧರ್ಮಕ್ಕೆ ಮತಾಂತರಗೊಳ್ಳುವುದನ್ನ’ ನಿಷೇಧಿಸುತ್ತದೆ. ‘ಬಲವಂತದ’ ಮತಾಂತರಕ್ಕೆ 3-5 ವರ್ಷಗಳ ಜೈಲು ಶಿಕ್ಷೆ ಮತ್ತು 25,000 ರೂ.ಗಳ ದಂಡವನ್ನು ಕಾನೂನಿನಲ್ಲಿ ಪ್ರಸ್ತಾಪಿಸಲಾಗಿದೆ.

ಅಪ್ರಾಪ್ತ ವಯಸ್ಕ, ಮಹಿಳೆ ಅಥವಾ ಎಸ್ಸಿ/ಎಸ್ಟಿ ವ್ಯಕ್ತಿಯನ್ನ ಮತಾಂತರ ಮಾಡಿದರೆ 3-10 ವರ್ಷ ಜೈಲು ಶಿಕ್ಷೆ ಮತ್ತು 50,000 ರೂ. ಸಾಮೂಹಿಕ ಮತಾಂತರಕ್ಕೆ 3-10 ವರ್ಷ ಜೈಲು ಶಿಕ್ಷೆ ಮತ್ತು 1 ಲಕ್ಷ ರೂ.ವರೆಗೆ ದಂಡ ವಿಧಿಸಲಾಗುತ್ತದೆ.

ಮತಾಂತರಗೊಳ್ಳಲು ಬಯಸುವ ಜನರು ಕನಿಷ್ಠ 60 ದಿನಗಳ ಮುಂಚಿತವಾಗಿ ಮತ್ತು ಮತಾಂತರದ ನಂತರ 30 ದಿನಗಳ ಒಳಗೆ ಜಿಲ್ಲಾಧಿಕಾರಿಗೆ ಘೋಷಿಸಬೇಕಿದೆ.

Leave a Comment

Your email address will not be published. Required fields are marked *