ಪಿ.ಚಿದಂಬರಂ ಗೆ ಮತ್ತೆ‌ ಇ.ಡಿ ಸಂಕಷ್ಟ| ಏಳು ಕಡೆ ದಾಳಿ ನಡೆಸಿದ ತನಿಖಾ ದಳ

Ad Widget ... ..

ಸಮಗ್ರ ನ್ಯೂಸ್: ಕಾಂಗ್ರೆಸ್‌ನ ಹಿರಿಯ ನಾಯಕ ಪಿ. ಚಿದಂಬರಂ ನಿವಾಸದ ಮೇಲೆ ಕೇಂದ್ರ ತನಿಖಾ ದಳ ಮಂಗಳವಾರ ಬೆಳಗ್ಗೆ ದೆಹಲಿ, ಹೈದರಾಬಾದ್ ಮತ್ತು ಚೆನ್ನೈನ ಹಲವು ಸ್ಥಳಗಳಲ್ಲಿ ದಾಳಿ ನಡೆಸಿದೆ.

Ad Widget

ವರದಿಗಳ ಪ್ರಕಾರ, ಈ ದಾಳಿಗಳು ಮಗ ಕಾರ್ತಿ ಚಿದಂಬರಂ ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿವೆ. ಹಿಂದೆಯೂ ಅವರ ಆಸ್ತಿಗಳ ಮೇಲೆ ಸಿಬಿಐ ದಾಳಿ ನಡೆಸಿತ್ತು.

ಹೊಸದಾಗಿ ಪ್ರಕರಣ ದಾಖಲಿಸಿದ್ದ ಸಿಬಿಐ ಅಧಿಕಾರಿಗಳು ಇಂದು ಕೇಂದ್ರದ ಮಾಜಿ ಸಚಿವ ಪಿ. ಚಿದಂಬರಂ ಮನೆ ಮೇಲೆ ದಾಳಿ ನಡೆಸಿದ್ದಾರೆ. ದೆಹಲಿ, ಮುಂಬೈ ಹಾಗೂ ತಮಿಳುನಾಡಿನ ನಿವಾಸಗಳಲ್ಲಿ ದಾಳಿ ಮಾಡಲಾಗಿದೆ. ಮನೆ, ಕಚೇರಿ ಸೇರಿದಂತೆ 7 ಸ್ಥಳಗಳಲ್ಲಿ ದಾಳಿ ಮಾಡಲಾಗಿದೆ ಎನ್ನಲಾಗಿದೆ.

Leave a Comment

Your email address will not be published. Required fields are marked *