Ad Widget .

ಪಠ್ಯಪುಸ್ತಕಗಳು ಪಕ್ಷ ಪುಸ್ತಕಗಳಾಗುತ್ತಿವೆ. ಬಿಜೆಪಿಯ ಪಟಾಲಂ ವಿಕೃತಿಯ ಪರಾಕಾಷ್ಠೆ – ಮಾಜಿ ಸಿಎಂ ಹೆಚ್ಡಿಕೆ ಕಿಡಿ

ಸಮಗ್ರ ನ್ಯೂಸ್: 10ನೇ ತರಗತಿ ಪಠ್ಯದಲ್ಲಿ ಆರ್.ಎಸ್.ಎಸ್ ಸಂಸ್ಥಾಪಕ ಹೆಡ್ಗೆವಾರ್ ಭಾಷಣ ಸೇರಿಸಿರುವ ಸರ್ಕಾರದ ಕ್ರಮಕ್ಕೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದು, ಪಠ್ಯಪುಸ್ತಕಗಳನ್ನು ʼಪಕ್ಷಪುಸ್ತಕʼಗಳನ್ನಾಗಿ ಮಾಡುವ ವ್ಯವಸ್ಥಿತ ಹುನ್ನಾರಕ್ಕೆ ನನ್ನ ಧಿಕ್ಕಾರವಿದೆ.

Ad Widget . Ad Widget . Ad Widget . Ad Widget .

ಬಿಜೆಪಿಯ ನೈಜ ಬಣ್ಣದ ವಿಸ್ತೃತರೂಪವೇ ಆಯ್ದ ಪಠ್ಯಗಳನ್ನು ಟಾರ್ಗೆಟ್‌ ಮಾಡಿ ಡಿಲೀಟ್‌ ಮಾಡುವುದು ಎಂದು ವಾಗ್ದಾಳಿ ನಡೆಸಿದ್ದಾರೆ.

Ad Widget . Ad Widget .

ಬಿಜೆಪಿಯ ಈ ಬುಡಮೇಲು ಕೃತ್ಯಗಳ ಬಗ್ಗೆ ನನಗೆ ಅಚ್ಚರಿಯೇನೂ ಇಲ್ಲ. ನನ್ನ ಜತೆ ಮೈತ್ರಿ ಸರಕಾರ ಮಾಡಿದಾಗ ಅವರ ಬೇಳೆ ಬೇಯಲಿಲ್ಲ. ʼಆಪರೇಷನ್‌ ಕಮಲʼದ ಅನೈತಿಕ ಮಾರ್ಗದಲ್ಲಿ ಅಧಿಕಾರಕ್ಕೆ ಬಂದ ʼಸ್ವಘೋಷಿತ ಡೋಂಗಿ ರಾಷ್ಟ್ರಭಕ್ತರುʼ ಇನ್ನೇನು ಮಾಡಲು ಸಾಧ್ಯ? ಎಂದು ಸರಣಿ ಟ್ವೀಟ್ ಮೂಲಕ ಕಿಡಿಕಾರಿದ್ದಾರೆ.

Leave a Comment

Your email address will not be published. Required fields are marked *