ಮಂಗಳೂರು: ಪ್ರಸಿದ್ಧ ಸ್ಯಾಕ್ಸೋಫೋನ್ ವಾದಕಿ ಸುಜಾತಾ ಆತ್ಮಹತ್ಯೆ

ಸಮಗ್ರ ನ್ಯೂಸ್: ಸ್ಯಾಕ್ಸೋಫೋನ್ ವಾದಕಿ ಸುಜಾತಾ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಕ್ತಿನಗರದ ಫ್ಲ್ಯಾಟ್ ವೊಂದರಲ್ಲಿ ಮಂಗಳವಾರ ರಾತ್ರಿ ನಡೆದಿದೆ.

Ad Widget ... ..

ಶಕ್ತಿನಗರದ ಫ್ಲ್ಯಾಟ್ ನಲ್ಲಿ ಪತಿ, ತಂದೆ, ತಾಯಿ ಮತ್ತು ಮಗುವಿನೊಂದಿಗೆ ವಾಸವಿದ್ದ, ಮೂಲತಃ ಮುಲ್ಕಿಯವರಾದ ಸ್ಯಾಕ್ಸೊಫೋನ್ ವಾದಕಿ ಸುಜಾತಾ ದೇವಾಡಿಗ (29) ಆತ್ಮಹತ್ಯೆ ಮಾಡಿಕೊಂಡವರು.

Ad Widget

ತಲೆ ನೋವು ಅಗುತ್ತಿದೆ ಎಂದು ಹೇಳಿ ಕೋಣೆಗೆ ಹೋದವರು ಹೊರಗೆ ಬಾರದಿದ್ದಾಗ ಮನೆಯವರು ಕೋಣೆಯಲ್ಲಿ ನೋಡಿದಾಗ ಘಟನೆ ಗೊತ್ತಾಗಿದೆ.

ಆರ್ಥಿಕ ಮುಗ್ಗಟ್ಟಿನ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದೆ ಎಂದು ಕಂಕನಾಡಿ ಪೊಲೀಸರು ತಿಳಿಸಿದ್ದಾರೆ.

Leave a Comment

Your email address will not be published. Required fields are marked *