Ad Widget .

ನಾಳೆ(ಮೇ.19) ಎಸ್ಎಸ್ಎಲ್ ಸಿ ಫಲಿತಾಂಶ- ಸಚಿವ ಬಿ.ಸಿ ನಾಗೇಶ್ ಟ್ವೀಟ್

ಸಮಗ್ರ ನ್ಯೂಸ್: ನಾಳೆ (ಮೇ.19) ಮಧ್ಯಾಹ್ನ 12.30ಕ್ಕೆ SSLC ಪರೀಕ್ಷೆ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.

Ad Widget . Ad Widget .

ಈ ಬಗ್ಗೆ ಬುಧವಾರ ಟ್ವೀಟ್ ಮಾಡಿ ಮಾಹಿತಿ ನೀಡಿರುವ ಅವರು, ‘ನಾಳೆ ಮಧ್ಯಾಹ್ನ 12.30ಕ್ಕೆ SSLC ಫಲಿತಾಂಶ ಪ್ರಕಟಿಸಲಾಗುತ್ತದೆ. ಮಧ್ಯಾಹ್ನ 1 ಗಂಟೆ ಬಳಿಕ ಇಲಾಖೆಯ ವೆಬ್‌ಸೈಟ್‌ನಲ್ಲಿ, ಶಾಲೆಗಳಲ್ಲಿ ಫಲಿತಾಂಶ ಲಭ್ಯವಿರಲಿದೆ. https://karresults.nic.in ಗೆ ಲಾಗಿನ್ ಆಗಿ ವಿದ್ಯಾರ್ಥಿಗಳು ಫಲಿತಾಂಶ ವೀಕ್ಷಿಸಬಹುದು’ ಎಂದು ತಿಳಿಸಿದ್ದಾರೆ.

Ad Widget . Ad Widget .

ನಾಳೆ ಮಧ್ಯಾಹ್ನ 12.30ಕ್ಕೆ SSLC ಫಲಿತಾಂಶ ಪ್ರಕಟಿಸಲಾಗುತ್ತದೆ. ಮಧ್ಯಾಹ್ನ 1 ಗಂಟೆ ಬಳಿಕ ಇಲಾಖೆಯ ವೆಬ್‌ಸೈಟ್‌ನಲ್ಲಿ, ಮೇ.20ರಂದು ಶಾಲೆಗಳಲ್ಲಿ ಫಲಿತಾಂಶ ಲಭ್ಯವಾಗಲಿದೆ.

ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಫೋನ್ ನಂಬರ್‌ಗಳಿಗೆ SMS ಮೂಲಕವೂ ಫಲಿತಾಂಶ ಕಳುಹಿಸಲಾಗುತ್ತದೆ. ಪರೀಕ್ಷೆ ಬರೆದ ಎಲ್ಲಾ ವಿದ್ಯಾರ್ಥಿಗಳಿಗೆ ಶುಭವಾಗಲಿ’ ಎಂದು ಶಿಕ್ಷಣ ಸಚಿವರು ಹಾರೈಸಿದ್ದಾರೆ. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ಮಾರ್ಚ್‌ 28ರಿಂದ ಏಪ್ರಿಲ್‌ 11ರವರೆಗೆ ಮಾರ್ಚ್‌ /ಏಪ್ರಿಲ್ 2022ರ ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆ ನಡೆಸಿತ್ತು.

ಈ ಬಾರಿ ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆಗೆ 15,387 ಶಾಲೆಗಳಿಂದ ಒಟ್ಟು 8,73,884 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. ಈ ಪೈಕಿ 4,52,732 ವಿದ್ಯಾರ್ಥಿಗಳು, 4,21,110 ವಿದ್ಯಾರ್ಥಿನಿಯರು, ನಾಲ್ವರು ತೃತೀಯ ಲಿಂಗಿ ವಿದ್ಯಾರ್ಥಿಗಳು ಮತ್ತು ವಿಭಿನ್ನ ಸಾಮರ್ಥ್ಯವುಳ್ಳ 5,307 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.

Leave a Comment

Your email address will not be published. Required fields are marked *