ಸಮಗ್ರ ನ್ಯೂಸ್: ಮುಂಗಾರು ಪೂರ್ವ ಮಳೆಯ ಆರ್ಭಟಕ್ಕೆ ರಾಜ್ಯದ ಜನತೆ ತತ್ತರಿಸಿ ಹೋಗಿದ್ದಾರೆ. ರಾಜ್ಯದ 22 ಜಿಲ್ಲೆಗಳಲ್ಲಿ ಕಳೆದ ಮೂರು ನಾಲ್ಕು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜನತೆ ತತ್ತರಿಸಿ ಹೋಗಿದ್ದಾರೆ.
ನಿನ್ನೆ ಭಾರೀ ಮಳೆಯಿಂದಾಗಿ ಮೈಸೂರು, ಮಂಡ್ಯ, ಶಿವಮೊಗ್ಗ, ದಕ್ಷಿಣ ಕನ್ನಡ ಸೇರಿದಂತೆ ನಾಲ್ಕು ಜಿಲ್ಲೆಗಳಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿತ್ತು. ಶುಕ್ರವಾರದ ಇಂದು ಉಡುಪಿ, ಶಿವಮೊಗ್ಗ ಜಿಲ್ಲೆಯಲ್ಲಿ ರಜೆ ಘೋಷಣೆ ಮಾಡಲಾಗಿದೆ. ಮಳೆಯ ಆರ್ಭಟದ ನಡುವೆ ಸಿಡಿಲ ಆರ್ಭಟಕ್ಕೆ ಮೂವರು ಸಾವನ್ನಪ್ಪಿದ್ದಾರೆ. ಇದರಿಂದಾಗಿ ಮಳೆ ಕಾರಣದಿಂದ ಸಾವನ್ನಪ್ಪಿದವರ ಸಂಖ್ಯೆ 9ಕ್ಕೆ ಏರಿದೆ.
ಕೊಡಗು, ಶಿವಮೊಗ್ಗ, ದಾವಣಗೆರೆ, ಮಂಡ್ಯ, ಚಿತ್ರದುರ್ಗ ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಬುಧವಾರ ರಾತ್ರಿಯಿಡಿ ಮಳೆ ಸುರಿದಿದೆ. ಈ ಕಾರಣದಿಂದಾಗಿ ಈ ಜಿಲ್ಲೆಗಳ 60ಕ್ಕೂ ಹೆಚ್ಚು ಮನೆಗಳಿಗೆ ಕೆರೆ ಚರಂಡಿ ನೀರು ನುಗ್ಗಿ ಹಾನಿಕೊಂಡಿವೆ. ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಸೇತುವೆ ಕೊಚ್ಚಿ ಹೋದ ಪರಿಣಾಮ, ರಸ್ತೆ ಸಂಚಾರ ಅಸ್ಥವ್ಯಸ್ಥಗೊಂಡಿತ್ತು. ಸಂಚಾರ ದಟ್ಟಣೆಯಿಂದ ವಾಹನ ಸವಾರರು ಹೈರಾಣಾಗಿದ್ದರು.