ಸಮಗ್ರ ನ್ಯೂಸ್: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶದ ಕುರಿತಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಹತ್ವದ ಮಾಹಿತಿ ನೀಡಿದ್ದು, ಜೂನ್ 3 ನೇ ವಾರದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಲು ಗುರಿ ಹೊಂದಲಾಗಿದೆ ಎಂದು ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಚಿವ ಬಿ.ಸಿ.ನಾಗೇಶ್, ದ್ವಿತೀಯ ಪಿಯು ಪರೀಕ್ಷೆ ಸುಸೂತ್ರವಾಗಿ ಮುಗಿದಿದೆ. ಮುಂದಿನ ವಾರದಿಂದ ಮೌಲ್ಯಮಾಪನ ಆರಂಭವಾಗುತ್ತದೆ. ಜೂನ್ 15 ಕ್ಕೆ ಮೌಲ್ಯಮಾಪನ ಕಾರ್ಯ ಪೂರ್ಣಗೊಳಿಸಿ, ಜೂನ್ ಮೂರನೇ ವಾರದಲ್ಲಿ ಫಲಿತಾಂಶ ಪ್ರಕಟಿಸುವ ಗುರಿ ಹೊಂದಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
2022ರ ಏಪ್ರಿಲ್, ಮೇ ತಿಂಗಳಿನಲ್ಲಿ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯು ದಿನಾಂಕ 18-05-2022ರಂದು ನಿಗದಿ ಪಡಿಸಿದ್ದ ವೇಳಾಪಟ್ಟಿಯಂತೆ ಮುಕ್ತಾಯವಾಗಿದ್ದು, ಜೂನ್ 3 ನೇ ವಾರದಲ್ಲಿ ಫಲಿತಾಂಶ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.