ಕರ್ನಾಟಕದ ಮೂರು ಜಿಲ್ಲೆಗಳಲ್ಲಿ ಕಬ್ಬಿಣ ಅದಿರು ರಪ್ತಿಗೆ ಸುಪ್ರಿಂ ಗ್ರೀನ್ ಸಿಗ್ನಲ್

ಸಮಗ್ರನ್ಯೂಸ್: ಕರ್ನಾಟಕದ ಬಳ್ಳಾರಿ, ಚಿತ್ರದುರ್ಗ ಮತ್ತು ತುಮಕೂರು ಜಿಲ್ಲೆಗಳ ಗಣಿಗಳಿಂದ ಉತ್ಖನನ ಮಾಡಿದ ಕಬ್ಬಿಣದ ಅದಿರನ್ನು ರಫ್ತು ಮಾಡಲು ಗಣಿಗಾರಿಕೆ ಸಂಸ್ಥೆಗಳಿಗೆ ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ.

Ad Widget ... ..

ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಮತ್ತು ನ್ಯಾಯಮೂರ್ತಿಗಳಾದ ಕೃಷ್ಣ ಮುರಾರಿ ಮತ್ತು ಹಿಮಾ ಕೊಹ್ಲಿ ಅವರನ್ನು ಒಳಗೊಂಡ ಪೀಠವು ಕೇಂದ್ರ ಸರ್ಕಾರದ ನಿಲುವನ್ನು ಗಮನಿಸಿ ಕಬ್ಬಿಣದ ಅದಿರಿನ ರಫ್ತಿನ ಮೇಲಿನ ನಿರ್ಬಂಧವನ್ನು ತೆಗೆದುಹಾಕಿತು ಮತ್ತು ಅಧಿಕಾರಿಗಳು ವಿಧಿಸಿದ ಷರತ್ತುಗಳನ್ನು ಪಾಲಿಸುವಂತೆ ಸಂಸ್ಥೆಗಳಿಗೆ ಸೂಚಿಸಿತು.

Ad Widget

ಈಗಾಗಲೇ ಅಗೆದ ಕಬ್ಬಿಣದ ಅದಿರು ದಾಸ್ತಾನನ್ನು ಕರ್ನಾಟಕದ ಮೂರು ಜಿಲ್ಲೆಗಳಲ್ಲಿ ಮಾರಾಟ ಮಾಡಲು ನಾವು ಅಪೀಲುದಾರರಿಗೆ ಅನುಮತಿ ನೀಡುತ್ತೇವೆ ಮತ್ತು ಇ-ಹರಾಜನ್ನು ಆಶ್ರಯಿಸದೆ ನೇರ ಒಪ್ಪಂದಗಳನ್ನು ಮಾಡಿಕೊಳ್ಳುವ ಮೂಲಕ ಕಬ್ಬಿಣದ ಅದಿರನ್ನು ಹಂಚಿಕೆ ಮಾಡಲು ಅನುಮತಿ ನೀಡುತ್ತೇವೆ. ಕರ್ನಾಟಕದಲ್ಲಿ ಉತ್ಪಾದಿಸಿದ ಕಬ್ಬಿಣದ ಅದಿರನ್ನು ವಿದೇಶಗಳಿಗೆ ರಫ್ತು ಮಾಡಲು ಅರ್ಜಿದಾರರಿಗೆ ಅನುಮತಿ ನೀಡಲಾಗಿದೆ ಆದರೆ ಭಾರತ ಸರ್ಕಾರದ ನೀತಿಗಳ ಪ್ರಕಾರ’ ಎಂದು ಕೋರ್ಟ್ ಹೇಳಿದೆ.

Leave a Comment

Your email address will not be published. Required fields are marked *