ಸಮಗ್ರ ನ್ಯೂಸ್: ಬ್ಯಾಂಕ್ ಖಾತೆ ದುರ್ಬಳಕೆ ಆರೋಪದಡಿ ನಟಿ ಚೈತ್ರ ಹಳ್ಳಿಕೇರಿ ತಮ್ಮ ಪತಿ ಮತ್ತು ಮಾವನ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಗುರು ಶಿಷ್ಯ, ಶ್ರೀ ದಾನಮ್ಮ ದೇವಿ ಚಿತ್ರಗಳಲ್ಲಿ ನಟಿಸಿರುವ ಚೈತ್ರಾ ಅವರು, ತಮ್ಮ ಅನುಮತಿ ಇಲ್ಲದೆ ಗೋಲ್ಡ್ ಲೋನ್ ಪಡೆದ ಬಗ್ಗೆ ಗಂಡ ಬಾಲಾಜಿ, ಮಾವ ಪೋತರಾಜ್, ಸೌತ್ ಇಂಡಿಯನ್ ಬ್ಯಾಂಕ್ ಮ್ಯಾನೇಜರ್ ವಿರುದ್ಧ ನಟಿ ದೂರು ದಾಖಲಿಸಿದ್ದು, ನನಗೆ ವಂಚಿಸಿ ಜೀವಬೆದರಿಕೆ ಎಂದು ದೂರಿನಲ್ಲಿ ಉಲ್ಲೇಖ ಮಾಡಿದ್ದಾರೆ.

ಮೈಸೂರಿನ ಜಯಲಕ್ಷ್ಮಿಪುರಂ ಠಾಣೆಯಲ್ಲಿ ಎಫ್.ಐ.ಆರ್ ದಾಖಲು ಮಾಡಿದ್ದು, ತಮ್ಮ ಬ್ಯಾಂಕ್ ಖಾತೆ ದುರ್ಬಳಕೆ ಆರೋಪದಡಿ ದೂರು ದಾಖಲಿಸಿದ್ದಾರೆ. ಈ ಹಿಂದೆಯೂ ಪತಿ ಪೋತರಾಜ್ ವಿರುದ್ಧ ಚೈತ್ರಾ ಬಸವನಗುಡಿ ಠಾಣೆಗೆ ದೂರು ನೀಡಿದ್ದರು.