ಮಂಗಳೂರು: ಜೂ. 1 ರಿಂದ ಮೀನುಗಾರಿಕೆಗೆ ತಾತ್ಕಾಲಿಕ ನಿಷೇಧ

ಸಮಗ್ರ ನ್ಯೂಸ್: ಕರಾವಳಿ ಭಾಗಗಳಲ್ಲಿ ಬಲೆಗಳು, ಮೀನುಗಾರಿಕಾ ಸಾಧನಗಳು ಅಥವಾ ಯಾವುದೇ ಯಾಂತ್ರಿಕೃತ ದೋಣಿಗಳನ್ನು ಬಳಸಿ ಹಾಗೂ 10 ಅಶ್ವಶಕ್ತಿ ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಇನ್‍ಬೋರ್ಡ್ ಅಥವಾ ಔಟ್‍ಬೋರ್ಡ್ ಯಂತ್ರಗಳನ್ನು ಅಳವಡಿಸಿರುವ ಸಾಂಪ್ರದಾಯಿಕ ದೋಣಿಗಳ ಮೂಲಕ ಮೀನುಗಾರಿಕೆ ಕೈಗೊಳ್ಳುವುದನ್ನು ಮೀನುಗಾರರ ಹಿತದೃಷ್ಠಿಯಿಂದ ಜೂನ್ 1ರಿಂದ ಜುಲೈ 31ರ ವರೆಗೆ 61 ದಿನಗಳ ಕಾಲ ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ.

. Ad Widget . Ad Widget . Ad Widget

10 ಅಶ್ವಶಕ್ತಿವರೆಗಿನ ಸಾಮರ್ಥ್ಯದ ಮೋಟಾರಿಕೃತ ಇಂಜಿನ್ ಹಾಗೂ ಸಾಂಪ್ರದಾಯಿಕ ಅಥವಾ ನಾಡದೊಣಿಗಳ ಮೂಲಕ ಮೀನುಗಾರಿಕೆ ಕೈಗೊಳ್ಳಲು ಅವಕಾಶವಿದ್ದು ನಿಯಮಗಳನ್ನು ಉಲ್ಲಂಘಿಸಿದಲ್ಲಿ ಕರ್ನಾಟಕ ಕಡಲ ಮೀನುಗಾರಿಕಾ ಕಾಯ್ದೆ_1986ರನ್ವಯ ಒಂದು ವರ್ಷದ ಅವಧಿಗೆ ಡೀಸೆಲ್ ಮೇಲಿನ ಸಹಾಯಧನ ಪಡೆಯಲು ಅನರ್ಹರಾಗುತ್ತಾರೆ ಎಂದು ಮೀನುಗಾರಿಕೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

. Ad Widget .

Leave a Comment

Your email address will not be published. Required fields are marked *