ಸಮಗ್ರ ನ್ಯೂಸ್: ಉಗ್ರರಿಗೆ ಆರ್ಥಿಕ ಸಹಾಯ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಗ್ರ ಯಾಸಿನ್ ಮಲಿಕ್ಗೆ ದೆಹಲಿಯ ಎನ್ಐಎ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ಪ್ರಕಟಿಸಿದೆ. ವಿಶೇಷ ಜಡ್ಜ್ ಪ್ರವೀಣ್ ಸಿಂಗ್ ಜೀವಾವಧಿ ಶಿಕ್ಷೆ ಜತೆಗೆ 10 ಲಕ್ಷ ದಂಡ ವಿಧಿಸಿ ಆದೇಶಿಸಿದ್ದಾರೆ.
2017ರಲ್ಲಿ ಕಾಶ್ಮೀರಿ ಕಣಿವೆಯಲ್ಲಿ ನಡೆದ ಉಗ್ರ ಚಟುವಟಿಕೆಗಳು, ದಾಳಿಗಳಿಗೆ ಆರ್ಥಿಕ ನೆರವು ನೀಡಿರುವ ಪ್ರಕರಣದಲ್ಲಿ ಯಾಸಿನ್ ಮಲಿಕ್ ಕೋರ್ಟ್ ಎದುರು ತಪ್ಪೊಪ್ಪಿಗೆ ನೀಡಿದ್ದಾನೆ. ಯಾಸಿನ್ ವಿರುದ್ಧ ಕಾನೂನು ಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅಡಿ ಪ್ರಕರಣ ದಾಖಲಿಸಲಾಗಿತ್ತು.
ಯಾಸಿನ್ ಮಾಲಿಕ್ ವಿರುದ್ಧ ಯುಎಪಿಎ ಕಾಯ್ದೆ ಸೆಕ್ಷನ್ 16 (ಭಯೋತ್ಪಾದನೆ), 17 (ಭಯೋತ್ಪಾದನೆಗೆ ನಿಧಿ ಸಂಗ್ರಹ), 18 (ಭಯೋತ್ಪಾದಕ ಕೃತ್ಯಕ್ಕೆ ಸಂಚು) ಹಾಗೂ 20 (ಭಯೋತ್ಪಾದಕ ಸಂಘಟನೆಯ ಸದಸ್ಯನಾಗಿರುವುದು), ಕಾನೂನು ಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯ ಸೆಕ್ಷನ್ 120-ಬಿ (ಅಪರಾಧ ಸಂಚು) ಮತ್ತು ಭಾರತೀಯ ದಂಡಸಂಹಿತೆಯ 124-ಎ (ದೇಶದ್ರೋಹ) ಪ್ರಕರಣಗಳನ್ನು ದಾಖಲಿಸಲಾಗಿತ್ತು. ನ್ಯಾಯಾಲಯದ ಎದುರು ತನ್ನ ಮೇಲಿನ ಆರೋಪಗಳನ್ನು ಯಾಸಿನ್ ಮಲಿಕ್ ಒಪ್ಪಿಕೊಂಡಿದ್ದ.