ಸಮಗ್ರ ನ್ಯೂಸ್: ಕಾಂಗ್ರೆಸ್ ಹಿರಿಯ ನಾಯಕ ಕಪಿಲ್ ಸಿಬಲ್ ಸಮಾಜವಾದಿ ಪಾರ್ಟಿಗೆ ಅಚ್ಚರಿ ರೀತಿಯಲ್ಲಿ ಪಕ್ಷಾಂತರವಾಗಿದ್ದಾರೆ. ರಾಜ್ಯಸಭಾ ಟಿಕೆಟ್ ಆಕಾಂಕ್ಷಿಯಾಗಿದ್ದ ಕಪಿಲ್ ಸಿಬಲ್‌ಗೆ ಕಾಂಗ್ರೆಸ್ ಟಿಕೆಟ್ ನೀಡಿರಲಿಲ್ಲ. ಹೀಗಾಗಿ ಕೊನೇ ಕ್ಷಣದಲ್ಲಿ ಅವರು ಕಾಂಗ್ರೆಸ್ ಪಕ್ಷಕ್ಕೆ ಬಿಗ್ ಶಾಕ್ ನೀಡಿದ್ದಾರೆ. ಸಮಾಜವಾದಿ ಪಾರ್ಟಿ ಕಪಿಲ್ ಸಿಬಲ್ ಅವರಿಗೆ ರಾಜ್ಯಸಭಾ ಟಿಕೆಟ್ ನೀಡಿದ್ದು, ಅವರು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ಕಾಂಗ್ರೆಸ್‌ನ ಹಿರಿಯ ನಾಯಕರಾಗಿದ್ದ ಕಪಿಲ್ ಸಿಬಲ್ ರಾಜ್ಯಸಭಾ ಟಿಕೆಟ್ ಸಿಗುತ್ತೆಂದು ಭಾವಿಸಿದ್ದರು. ಹೈಕಮಾಂಡ್ ಅವರಿಗೆ ಟಿಕೆಟ್ ನೀಡಿಲ್ಲ. ಹೀಗಾಗಿ ಅವರು, ಪಕ್ಷದ ಎಲ್ಲಾ ಹುದ್ದೆಗಳಿಗೂ ರಾಜೀನಾಮೆ ನೀಡಿದ್ದಾರೆ. ಅನಂತರ ಸಮಾಜವಾದಿ ಪಾರ್ಟಿಗೆ ಸೇರಿ, ಆ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿಸಿದ್ದಾರೆ.