ಬಿಜೆಪಿ ಸೇರುವಂತೆ ಒತ್ತಡ; ಮಣಿಯದ್ದಕ್ಕೆ ಇಡಿ ಸಂಚು – ಅಲವತ್ತುಕೊಂಡ ಡಿ.ಕೆ ಶಿವಕುಮಾರ್

ಸಮಗ್ರ ನ್ಯೂಸ್: ಬಿಜೆಪಿ ಪಕ್ಷಕ್ಕೆ ಸೇರುವಂತೆ ನನ್ನ ಮೇಲೆ ಒತ್ತಡ ಹೇರಲಾಗುತ್ತಿದೆ. ಅದಕ್ಕೆ ಒಪ್ಪದಿದ್ದಕ್ಕೆ ಸಂಚು ರೂಪಿಸಲಾಗಿದೆ. ಸರ್ಕಾರಿ ಸಂಸ್ಥೆಗಳು ನನ್ನ ವಿರುದ್ಧ ಪ್ರಕರಣ ದಾಖಲಿಸುತ್ತಿವೆ. ನನ್ನನ್ನು ಹೆದರಿಸುವುದು ಅಷ್ಟು ಸುಲಭವಲ್ಲ – ಕರ್ನಾಟಕ ಕಾಂಗ್ರೆಸ್​ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

Ad Widget ... ..

ಕರ್ನಾಟಕ ಕಾಂಗ್ರೆಸ್​ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಜಾರಿ ನಿರ್ದೇಶನಾಲಯ ಪ್ರಕರಣ ದಾಖಲಿಸುವ ಮಾತು ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಆಡಳಿತಾರೂಢ ಬಿಜೆಪಿ ವಿರುದ್ಧ ಟ್ವೀಟ್​ ಮೂಲಕ ಡಿ.ಕೆ. ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ. ಬಿಜೆಪಿಗೆ ಸೇರುವಂತೆ ನನ್ನ ಮೇಲೆ ಒತ್ತಡ ಹೇರಲಾಗುತ್ತಿದೆ. ಬಿಜೆಪಿಗೆ ಸೇರಲು ಒಪ್ಪದಿದ್ದಾಗ ನನ್ನ ವಿರುದ್ಧ ಸಂಚು ರೂಪಿಸಲಾಗುತ್ತಿದೆ ಎಂದು ಡಿಕೆಶಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Ad Widget

ಇಂಗ್ಲೀಷ್ ಮತ್ತು ಕನ್ನಡ ಎರಡೂ ಭಾಷೆಗಳಲ್ಲಿ ಟ್ವೀಟ್ ಮಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸರ್ಕಾರಿ ಸಂಸ್ಥೆಗಳು ನನ್ನ ವಿರುದ್ಧ ಪ್ರಕರಣ ದಾಖಲಿಸುತ್ತಿವೆ. ನನ್ನನ್ನು ಹೆದರಿಸುವುದು ಅಷ್ಟು ಸುಲಭವಲ್ಲ. ಬಿಜೆಪಿಯ 40% ಕಮಿಷನ್ ಸರ್ಕಾರದಿಂದ ಜನರು ಬೇಸತ್ತಿದ್ದಾರೆ. ಈ ರಾಜಕೀಯ ಸೇಡಿಗೆ ಸರಿಯಾದ ಉತ್ತರ ಸಿಗಲಿದೆ ಎಂದು ಟ್ವಿಟರ್​ನಲ್ಲಿ ಬಿಜೆಪಿ ವಿರುದ್ಧ ಡಿ.ಕೆ.ಶಿವಕುಮಾರ್ ಗುಡುಗಿದ್ದಾರೆ.

Leave a Comment

Your email address will not be published. Required fields are marked *