ಸಮಗ್ರ ನ್ಯೂಸ್: ಮುಂಗಾರು ಮಳೆಯು ಮೇ 27ರಂದು ಕೇರಳಕ್ಕೆ ಆಗಮಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆಯು (ಐಎಂಡಿ) ಬುಧವಾರ ತಿಳಿ ಸಿದೆ. ರಾಜ್ಯದಲ್ಲಿ ಶನಿವಾರದವರೆಗೆ ಗುಡುಗು, ಮಿಂಚು, ಗಾಳಿ ಸಹಿತ ಮಳೆ ಯಾಗುವ ಎಚ್ಚರಿಕೆಯನ್ನೂ ಕೊಡಲಾಗಿದೆ.
ಕೇರಳ ಮತ್ತು ಲಕ್ಷದ್ವೀಪ ಕರಾವಳಿ ಭಾಗದಲ್ಲಿ 40-50 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದ್ದು, ಅದು 60 ಕಿ.ಮೀ.ವರೆಗೂ ಹೆಚ್ಚುವ ಸಾಧ್ಯತೆಯಿದೆ. ಹಾಗಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಸಲಾಗಿದೆ.
ಕರ್ನಾಟಕಕ್ಕೂ ಎಚ್ಚರಿಕೆ: ಕರ್ನಾಟಕ, ಲಕ್ಷದ್ವೀಪ, ಆಂಧ್ರಪ್ರದೇಶ, ತೆಲಂಗಾಣ, ತಮಿಳು ನಾಡು ಮತ್ತು ಪುದು ಚೆರಿಯಲ್ಲಿಯೂ ಮೇ 29ರ ವರೆಗೆ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಕೇರಳ ಮತ್ತು ತಮಿಳು ನಾಡಿನಲ್ಲಿ ಮೇ 26 ರಂದು ಭಾರೀ ಮಳೆ ಯಾಗುವ ಸಾಧ್ಯತೆ ಯಿದೆ.
ಅದೇ ದಿನ ಕರ್ನಾಟಕ, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ಪಶ್ಚಿಮ ಬಂಗಾಲ ಮತ್ತು ತಮಿಳುನಾಡಿನಲ್ಲಿ ಗುಡುಗು ಸಹಿತ ಮಳೆ ಯಾಗಲಿದೆ. ಜಮ್ಮು-ಕಾಶ್ಮೀರ, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಂಜಾಬ್, ಹರಿಯಾಣ, ಚಂಡೀಗಢ, ದಿಲ್ಲಿ, ಉತ್ತರ ಪ್ರದೇಶ ಮತ್ತು ರಾಜಸ್ಥಾನದಲ್ಲಿ ಮೇ 28 ಮತ್ತು 29ರಂದು ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.