ಸಮಗ್ರ ನ್ಯೂಸ್: ಸ್ಯಾಂಡಲ್‌ವುಡ್ ನಟಿ ತಾರಾ ಮತ್ತೆ ಸುದ್ದಿಯಲ್ಲಿದ್ದಾರೆ. ತಾರಾ ಮತ್ತೆ ಗರ್ಭಿಣಿಯಾಗಿದ್ದಾರೆ, ಅದಕ್ಕೆ ಪೂರಕವೆಂಬಂತೆ ತಾರಾ ಗರ್ಭ ಧರಸಿರುವ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ. ತಾರಾ ಅವರು ಎರಡನೇ ತಾಯಿ ಆಗ್ತಿದ್ದಾರಾ ಅಂತಾ ಅಭಿಮಾನಿಗಳು ಕಾಮೆಂಟ್ ಮಾಡುತ್ತಿದ್ದಾರೆ.
ಕನ್ನಡ ಚಿತ್ರರಂಗ ಮತ್ತು ರಾಜಕೀಯದ ಜೊತೆ ಕಿರುತೆರೆಯಲ್ಲೂ ಬ್ಯುಸಿಯಿರುವ ನಟಿ ತಾರಾ ಮತ್ತೆ ಸುದ್ದಿಯಲ್ಲಿದ್ದಾರೆ. ಮತ್ತೆ ಗರ್ಭಿಣಿಯಾಗಿರುವ ಫೋಟೋಗಳ ಮೂಲಕ ಸೌಂಡ್ ಮಾಡುತ್ತಿದ್ದಾರೆ. ಸಾಕಷ್ಟು ಸಿನಿಮಾಗಳ ಮೂಲಕ ಛಾಪೂ ಮೂಡಿಸಿರುವ ತಾರಾ, ಗರ್ಭಿಣಿಯಾಗಿರುವ ನಿಜ ಆದರೆ ನಿಜ ಜೀವನದಲ್ಲಿ ಅಲ್ಲ, ಬದಲಿಗೆ ತಾರಾ ನಟಿಸುತ್ತಿರುವ ಮುಂದಿನ ಚಿತ್ರದಲ್ಲಿ ಗರ್ಭಿಣಿ ಪಾತ್ರಕ್ಕೆ ಜೀವತುಂಬಿದ್ದಾರೆ.
ಹಳದಿ ಮತ್ತು ಕೆಂಪು ಬಣ್ಣದ ಸೀರೆಯಲ್ಲಿ ಬೇಬಿ ಬಂಪ್ ಹಿಡಿದು ಪೋಸ್ ಕೊಟ್ಟಿದ್ದಾರೆ. ಬಿಸ್ ಬಾಸ್ ಸೀಸನ್ ೮ರ ಖ್ಯಾತಿಯ ರಾಜೀವ್ ನಟನೆಯ `ಉಸಿರೇ ಉಸಿರೇ’ ಚಿತ್ರದಲ್ಲಿ ತಾರಾ ಪ್ರಮುಖ ಪಾತ್ರಕ್ಕೆ ಜೀವತುಂಬಿದ್ದಾರೆ. ಈ ಚಿತ್ರದಲ್ಲಿನ ತಾರಾ ಅವರ ಬೇಬಿ ಬಂಪ್ ಫೋಟೋಗಳು ಈಗ ವೈರಲ್ ಆಗುತ್ತಿದೆ. ಎನ್ ಗೊಂಬೆ ಪ್ರೊಡಕ್ಷನ್ಸ್ ಲಾಂಛನದಲ್ಲಿ ಪ್ರದೀಪ್ ಯಾದವ್ ನಿರ್ಮಾಣ ಮಾಡುತ್ತಿದ್ದಾರೆ. ಶ್ರೀಜಿ ಘೋಷ್ ನಾಯಕಿಯಾಗಿ ಕಾಣಿಸಿಕೊಳ್ತಿದ್ದಾರೆ.