ಸಮಗ್ರ ನ್ಯೂಸ್: ಬಾಲಿವುಡ್ ನಟ ಶಾರುಖ್ ಖಾನ್ ಅವರ ಮಗ ಆರ್ಯನ್ ಖಾನ್‌ಗೆ ಡ್ರಗ್ಸ್ ಪ್ರಕರಣದಲ್ಲಿ ಎನ್‌ಸಿಬಿ ಕ್ಲೀನ್ ಚಿಟ್ ನೀಡಿದೆ ಎಂದು ಮೂಲಗಳು ತಿಳಿಸಿವೆ.
ಡ್ರಗ್ಸ್ ಪಾರ್ಟಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಬಾಲಿವುಡ್ ನಟ ಶಾರುಖ್ ಖಾನ್ ಅವರ ಮಗ ಆರ್ಯನ್ ಖಾನ್ ವಿರುದ್ಧದ ಆರೋಪ ಪಟ್ಟಿಯನ್ನು ಇಂದು ನಾರ್ಕೋಟಿಕ್ ಕಂಟ್ರೋಲ್ ಬ್ಯೂರೋ ನ್ಯಾಯಾಲಯಕ್ಕೆ ಹಾಜರುಪಡಿಸಿದೆ.
ಅದನ್ನು ಸೆಷನ್ಸ್ ನ್ಯಾಯಾಲಯದಲ್ಲಿ ಇಲಾಖೆಯ ಮುಂದೆ ಸಲ್ಲಿಸಲಾಗಿದೆ. ಈ ಪ್ರಕರಣದಲ್ಲಿ ಆರ್ಯನ್ ಖಾನ್‌ಗೆ ಎನ್ಸಿಬಿಯಿಂದ ಕ್ಲೀನ್ ಚಿಟ್ ಸಿಕ್ಕಿದೆ. ಮುಂಬೈ ಕ್ರೂಸ್ ಡ್ರಗ್ಸ್ ಪ್ರಕರಣದಲ್ಲಿ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಆರ್ಯನ್ ಖಾನ್‌ಗೆ ಕ್ಲೀನ್ ಚಿಟ್ ನೀಡಿದೆ ಎಂದು ಮೂಲಗಳು ತಿಳಿಸಿವೆ. ಬಾಲಿವುಡ್ ಬಾದ್ಷಾ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ನನ್ನು ಕಳೆದ ವರ್ಷ ಮುಂಬೈ ಕರಾವಳಿಯ ಕ್ರೂಸ್ ಮೇಲಿನ ದಾಳಿ ವೇಳೆ ಡ್ರಗ್ಸ್ ಪತ್ತೆಯಾದ ಹಿನ್ನೆಲೆಯಲ್ಲಿ ಬಂಧಿಸಲಅಗಿತ್ತು. ಬಳಿಕ ಆತನಿಗೆ ಜಾಮೀನು ನೀಡಲಾಗಿತ್ತು.
ಈ ಪ್ರಕರಣದಲ್ಲಿ 14 ಮಂದಿ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಲಾಗಿದ್ದು, ಸಾಕ್ಷ್ಯಾಧಾರಗಳ ಕೊರತೆಯಿಂದ 6 ಮಂದಿ ವಿರುದ್ಧ ದೂರು ದಾಖಲಾಗಿರಲಿಲ್ಲ. ಮೇ 29ರಂದು ಚಾರ್ಜ್‌ಶೀಟ್ ಸಲ್ಲಿಸಲು 60 ದಿನಗಳ ವಿಸ್ತರಣೆಯು ಮುಕ್ತಾಯಗೊಳ್ಳುತ್ತಿದ್ದಂತೆ ಎನ್‌ಸಿಬಿ ತನ್ನ ಅಂತಿಮ ಆರೋಪಪಟ್ಟಿಯನ್ನು ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿದೆ. ಆರ್ಯನ್ ಖಾನ್ ಬಳಿ ದಾಳಿ ವೇಳೆ ಯಾವುದೇ ಡ್ರಗ್ಸ್ ಪತ್ತೆಯಾಗಿಲ್ಲ ಎಂದು ಆರೋಪಪಟ್ಟಿಯಲ್ಲಿ ತಿಳಿಸಲಾಗಿದೆ.
ಆರ್ಯನ್ ಖಾನ್ 2021ರ ಅಕ್ಟೋಬರ್‌ನಲ್ಲಿ ಡ್ರಗ್ ಕೇಸ್‌ನಲ್ಲಿ ಸಿಲುಕಿಕೊಂಡಿದ್ದರು. ಮುಂಬೈನ ಸಮುದ್ರ ತೀರದ ಐಷಾರಾಮಿ ಹಡಗಿನಲ್ಲಿ ಡ್ರಗ್ ಪಾರ್ಟಿ ಮಾಡುತ್ತಿದ್ದಾರೆ ಎಂಬ ಆರೋಪದ ಮೇಲೆ ಕಳೆದ ವರ್ಷ ಅಕ್ಟೋಬರ್ 8ರಂದು ಅವರನ್ನು ಬಂಧಿಸಲಾಗಿತ್ತು. ಹಲವು ದಿನಗಳ ಕಾಲ ಜೈಲಿನಲ್ಲಿದ್ದ ಆರ್ಯನ್‌ಗೆ ಸತತ ಪ್ರಯತ್ನದ ನಂತರ ಅಕ್ಟೋಬರ್ 28ರ ವೇಳೆಗೆ ಆತನಿಗೆ ಜಾಮೀನು ಸಿಕ್ಕಿತ್ತು.