ಭಾರತೀಯರು ಸೇರಿ 22 ಪ್ರಯಾಣಿಕರಿದ್ದ ವಿಮಾನ ನಾಪತ್ತೆ

ಸಮಗ್ರ ನ್ಯೂಸ್: ನೇಪಾಳದಲ್ಲಿ 22 ಪ್ರಯಾಣಿಕರಿದ್ದ ವಿಮಾನವೊಂದು ಸಂಪರ್ಕ ಕಳೆದುಕೊಂಡಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.

. Ad Widget . Ad Widget . Ad Widget

22 ಮಂದಿಯೊಂದಿಗೆ ಪೋಖರಾದಿಂದ ನೇಪಾಳದ ಜೋಮ್ಸೋಮ್‌ ಗೆ ಹಾರುತ್ತಿದ್ದ ವಿಮಾನವು ಭಾನುವಾರ ಬೆಳಗ್ಗೆ ಸಂಪರ್ಕ ಕಳೆದುಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

. Ad Widget .

ತಾರಾ ಏರ್‌ನ 9 NAET ಅವಳಿ-ಎಂಜಿನ್ ವಿಮಾನವು ಬೆಳಿಗ್ಗೆ 9.55 ಕ್ಕೆ ಹಾರಿದ್ದು, ಸ್ವಲ್ಪ ಸಮಯದ ನಂತರ ರಾಡಾರ್‌ ನಿಂದ ಸಂಪರ್ಕ ಕಳೆದುಕೊಂಡಿದೆ. ವಿಮಾನದ ಪತ್ತೆಗೆ ಫೀಸ್ಟೆಲ್ ಹೆಲಿಕಾಪ್ಟರ್ ಕಳುಹಿಸಲಾಗಿದೆ.

ವಿಮಾನದ ಪೈಲಟ್ ಅವರನ್ನು ಪ್ರಭಾಕರ ಪ್ರಸಾದ್ ಘಿಮಿರೆ ಎಂದು ಗುರುತಿಸಲಾಗಿದೆ. ನಾಪತ್ತೆಯಾಗಿರುವ ವಿಮಾನದಲ್ಲಿ ನಾಲ್ವರು ಭಾರತೀಯರು ಹಾಗೂ ಇಬ್ಬರು ವಿದೇಶಿ ಪ್ರಜೆಗಳಿದ್ದಾರೆ. ಉಳಿದ ಪ್ರಯಾಣಿಕರು ನೇಪಾಳಿ ಪ್ರಜೆಗಳಾಗಿದ್ದಾರೆ.

Leave a Comment

Your email address will not be published. Required fields are marked *