Ad Widget .

ಕಾಂಗ್ರೆಸ್ ಗೆ ಮುಖ್ಯಮಂತ್ರಿ ಚಂದ್ರು ಗುಡ್ ಬೈ| ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ ಹಿರಿಯ ನಟ

ಸಮಗ್ರ ನ್ಯೂಸ್: ರಾಜ್ಯಸಭೆ ಟಿಕೆಟ್ ನಿರೀಕ್ಷೆಯಲ್ಲಿದ್ದ ಹಿರಿಯ ನಟ ಮುಖ್ಯಮಂತ್ರಿ ಚಂದ್ರು ಪ್ರಾಥಮಿಕ ಸದಸ್ಯತ್ವಕ್ಕೆ ಇಂದು (ಮೇ 29) ರಾಜೀನಾಮೆ ಸಲ್ಲಿಸಿದ್ದಾರೆ.

Ad Widget . Ad Widget .

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ಗೆ ರಾಜೀನಾಮೆ ಸಲ್ಲಿಸಿದ ಮುಖ್ಯಮಂತ್ರಿ ಚಂದ್ರು ಅವರು, ಪಕ್ಷಕ್ಕೆ ಪ್ರಾಮಾಣಿಕ ಸೇವೆ ಸಲ್ಲಿಸಿದ್ರೂ‌ ಗುರುತಿಸಿಲ್ಲ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ಪರೋಕ್ಷವಾಗಿ ಬೇಸರ ಹೊರ ಹಾಕಿದ್ದಾರೆ. ಎರಡು ದಿನಗಳ ಹಿಂದಷ್ಟೇ ಸಾಂಸ್ಕೃತಿಕ ಸಮಿತಿ ಚೇರ್ ಮನ್ ಆಗಿ ನೇಮಕವಾಗಿದ್ದರು.

Ad Widget . Ad Widget .

ವೈಯಕ್ತಿಕ ಕಾರಣಕ್ಕೆ ಸೇವೆ ಸಲ್ಲಿಸುತ್ತಿದ್ದೇನೆ ಎಂದು ತಿಳಿಸಿರುವ ಮುಖ್ಯಮಂತ್ರಿ ಚಂದ್ರು, ಜನಸೇವೆ ಮಾಡುವ ನಿಟ್ಟಿನಲ್ಲಿ ದೇಶದಲ್ಲೇ ಸುದೀರ್ಘ ಇತಿಹಾಸವಿರುವ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದೆ. ಪಕ್ಷದಲ್ಲಿದ್ದು ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ. ಇಲ್ಲಿವರೆಗೂ ನನಗೆ ಪಕ್ಷದಲ್ಲಿ ಬೆಂಬಲಿಸಿ, ಪ್ರೀತಿ ನೀಡಿದ ಎಲ್ಲರಿಗೂ ಧನ್ಯವಾದ ಎಂದು ತಿಳಿಸಿದ್ದಾರೆ.

Leave a Comment

Your email address will not be published. Required fields are marked *