Ad Widget .

ಪೊಲೀಸರಿಗೆ ನಿಂದನೆ ಪ್ರಕರಣ| ಎಸ್ಡಿಪಿಐ ಕಾರ್ಯಕರ್ತರಿಗಾಗಿ ಶೋಧ

ಸಮಗ್ರ‌ ನ್ಯೂಸ್: ಕರ್ತವ್ಯದಲ್ಲಿ ಪೊಲೀಸರಿಗೆ ಹೀನಾಯವಾಗಿ ನಿಂದಿಸಿದ ಎಸ್‌ಡಿಪಿಐ ಕಾರ್ಯಕರ್ತರಿಗೆ ಮಂಗಳೂರು ಪೊಲೀಸರು ತಲಾಶ್ ಆರಂಭಿಸಿದ್ದಾರೆ. ಮೇ 27 ರಂದು ನಗರ ಹೊರವಲಯದ ಕಣ್ಣೂರಿನಲ್ಲಿ ನಡೆದಿದ್ದ ಎಸ್.ಡಿ.ಪಿ.ಐ ಸಮಾವೇಶಕ್ಕೆ ಬೈಕ್ ಮತ್ತು ಕಾರ್ ನಲ್ಲಿ ಬಂದ ಸವಾರ, ಸಹ ಸವಾರರು ಸೇರಿ ಒಟ್ಟು ಆರು ಮಂದಿ ಕಾರ್ಯಕರ್ತರು ಪೊಲೀಸರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದು ಆರೋಪಿಗಳ ವಿರುದ್ಧ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget . Ad Widget .

ಆರೋಪಿಗಳ ವಿರುದ್ಧ ಐ.ಪಿ.ಸಿ 143, 353, 504, 149 ಅಡಿ ಪ್ರಕರಣ ದಾಖಲಾಗಿದೆ..

Ad Widget . Ad Widget .

ಚೆಕ್ ಪೋಸ್ಟ್ ಕರ್ತವ್ಯದಲ್ಲಿದ್ದ ಎ.ಎಸ್.ಐ ಚಂದ್ರಶೇಖರ್ ದೂರಿನ ಆಧಾರದಲ್ಲಿ ಪ್ರಕರಣ ದಾಖಲಾಗಿದ್ದು,ಕರ್ತವ್ಯದಲ್ಲಿದ್ದ ಪೊಲೀಸ್ ಕಾನ್ಸ್ಟೇಬಲ್ ಸಂಗನ ಗೌಡ ಮೈಮೇಲೆ ಹಾಯಿಸುವಂತೆ ಬೈಕ್ ಸವಾರಿ ಮಾಡಲಾಗಿದೆ. ಕರ್ತವ್ಯ ನಿರತ ಪೊಲೀಸರಿಗೆ ಅಡೆತಡೆಯುಂಟು ಮಾಡಿ ನಿಂದನೆ ಮಾಡಿರುವ ಬಗ್ಗೆ ದೂರಲಾಗಿದೆ.ಸದ್ಯ ಅಪರಿಚಿತ 5 ಮಂದಿ ಮತ್ತು ಇತರ ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

Leave a Comment

Your email address will not be published. Required fields are marked *