Ad Widget .

ರೈತನಾಯಕರಿಗೆ ಮಸಿಬಳಿದ ಕಿಡಿಗೇಡಿಗಳು; ಆರೋಪಿಗಳ ಬಂಧನ

ಸಮಗ್ರ ನ್ಯೂಸ್: ರಾಷ್ಟ್ರೀಯ ರೈತ ಮುಖಂಡ ರಾಕೇಶ್ ಟಿಕಾಯತ್ ಮತ್ತು ಯದುವೀರ್ ಸಿಂಗ್ ಪತ್ರಿಕಾಗೋಷ್ಠಿ ನಡೆಯುತ್ತಿದ್ದ ವೇಳೆ ಕಿಡಿಗೇಡಿಗಳು ಮೈಕ್ ನಿಂದ ಹಲ್ಲೆ ನಡೆಸಿ, ಮಸಿ ಬಳಿದ ಘಟನೆ ಗಾಂಧಿಭವನದಲ್ಲಿ ಸೋಮವಾರ ನಡೆಯಿತು.

Ad Widget . Ad Widget .

ಕೋಡಿಹಳ್ಳಿ ಚಂದ್ರಶೇಖರ್ ಕಿಕ್ ಬ್ಯಾಕ್ ಆರೋಪ ಪ್ರಕರಣದಲ್ಲಿ ತಮ್ಮ ಹೆಸರು ಎಳೆದು ತಂದ ಹಿನ್ನೆಲೆಯಲ್ಲಿ ಅವರು ಸ್ಪಷ್ಟೀಕರಣ ನೀಡುತ್ತಿದ್ದರು. ಈ ವೇಳೆ ಪತ್ರಕರ್ತರ ಹಿಂಬದಿಯಲ್ಲಿ ಕುಳಿತಿದ್ದ ವ್ಯಕ್ತಿ ಗಣ್ಯರಿದ್ದ ವೇದಿಕೆಯ ಮೇಟ್ಟಿಲೇರಿ ಟಿವಿ ಮೈಕ್ ನಿಂದ ಯದುವೀರ್ ಸಿಂಗ್ ಮೇಲೆ ಹಲ್ಲೆ ನಡೆಸಿದ ಜತೆಗೆ ಹಿಂಬಾಲಿಸಿದ ಗುಂಪು ರೈತ ನಾಯಕರಿಗೆ ಮಸಿ ಎರಚಿತು.

Ad Widget . Ad Widget .

ಮೋದಿ ಮೋದಿ ಎಂದು ಘೋಷಣೆ ಕೂಗಿದರು.ಕೂಡಲೇ ಸ್ಥಳದಲ್ಲಿದ್ದ ರೈತರು ಹಲ್ಲೆಕೋರರನ್ನು ಹಿಡಿದು ಥಳಿಸಿ ಪೋಲಿಸರಿಗೆ ಒಪ್ಪಿಸಿದರು.

Leave a Comment

Your email address will not be published. Required fields are marked *