May 2022

“ಏಕಲವ್ಯ” ಪ್ರಶಸ್ತಿ ಪುರಸ್ಕೃತ ಮಾಜಿ ಕಬಡ್ಡಿ ಆಟಗಾರ ಉದಯ ಚೌಟ ಇನ್ನಿಲ್ಲ

ಸಮಗ್ರ ನ್ಯೂಸ್: ಅಂತಾರಾಷ್ಟ್ರೀಯ ಮಟ್ಟದ ಕಬಡ್ಡಿ ಆಟಗಾರ, ಬ್ಯಾಂಕ್ ಉದ್ಯೋಗಿ ಮಾಣಿ ಬದಿಗುಡ್ಡೆ ನಿವಾಸಿ ಉದಯ ಚೌಟ ಅವರು ಮೇ 21ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನ ಹೊಂದಿದರು. ಮೃತರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಮೃತರು ಕಬಡ್ಡಿ ಆಟಗಾರರಾಗಿ ವಿಶೇಷ ಸಾಧನೆ ಮಾಡಿದ್ದು, 2007ರ ಕಬಡ್ಡಿ ವಿಶ್ವಕಪ್ ನಲ್ಲಿ ಭಾರತ ತಂಡದ ಉತ್ತಮ ಆಟಗಾರನಾಗಿ ಮೂಡಿಬಂದಿದ್ದರು. ಏಕಲವ್ಯ ಪ್ರಶಸ್ತಿ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿ ಸಮ್ಮಾನಗಳನ್ನು ಪಡೆದಿದ್ದಾರೆ.

“ಏಕಲವ್ಯ” ಪ್ರಶಸ್ತಿ ಪುರಸ್ಕೃತ ಮಾಜಿ ಕಬಡ್ಡಿ ಆಟಗಾರ ಉದಯ ಚೌಟ ಇನ್ನಿಲ್ಲ Read More »

ಮರಕ್ಕೆ ಕ್ರೂಸರ್ ಢಿಕ್ಕಿ; 7 ಮಂದಿ ಸ್ಥಳದಲ್ಲೇ ಸಾವು| ಮದುವೆಗೆ ತೆರಳುತ್ತಿದ್ದವರು ಮಸಣಕ್ಕೆ!!

ಸಮಗ್ರ ನ್ಯೂಸ್: ಧಾರವಾಡ: ಮರಕ್ಕೆ ಕ್ರೂಸರ್ ಡಿಕ್ಕಿಯಾಗಿ 7 ಜನರು ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಭೀಕರ ರಸ್ತೆ ಅಪಘಾತವು ಜಿಲ್ಲೆಯ ತಾಲೂಕಿನ ಬಾಡ ಗ್ರಾಮದ ಬಳಿ ದುರ್ಘಟನೆ ಸಂಭವಿಸಿದೆ. ಬೆನಕಟ್ಟಿ ಗ್ರಾಮದ ಅನನ್ಯಾ(14), ಹರೀಶ್(13), ಶಿಲ್ಪಾ(34), ನೀಲವ್ವ(60), ಮಧುಶ್ರೀ(20), ಮಹೇಶ್ವರಯ್ಯ(11), ಶಂಭುಲಿಂಗಯ್ಯ(35) ಮೃತಪಟ್ಟವರು. 6 ಜನರ ಸ್ಥಿತಿ ಗಂಭೀರವಾಗಿದ್ದು, ಹುಬ್ಬಳ್ಳಿ ಕಿಮ್ಸ್​ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ನಿಗದಿ ಗ್ರಾಮದ ಯುವಕನ ನಿಶ್ಚಿತಾರ್ಥ ಮುಗಿಸಿಕೊಂಡು ಮನ್ಸೂರು ಗ್ರಾಮದಿಂದ ಬೆನಕಟ್ಟಿಗೆ ಹಿಂದಿರುಗುವಾಗ ರಾತ್ರಿ 1.30ರಿಂದ 2 ಗಂಟೆ ಸುಮಾರಿಗೆ ಭೀಕರ ಅಪಘಾತ

ಮರಕ್ಕೆ ಕ್ರೂಸರ್ ಢಿಕ್ಕಿ; 7 ಮಂದಿ ಸ್ಥಳದಲ್ಲೇ ಸಾವು| ಮದುವೆಗೆ ತೆರಳುತ್ತಿದ್ದವರು ಮಸಣಕ್ಕೆ!! Read More »

ಕೇಂದ್ರ, ರಾಜ್ಯದಿಂದ ನಾರಾಯಣ ಗುರುಗಳಿಗೆ ಹೆಜ್ಜೆಹೆಜ್ಜೆಗೂ ಅವಮಾನ – ಜೆ.ಆರ್ ಲೋಬೊ

ಸಮಗ್ರ ನ್ಯೂಸ್: ಹತ್ತನೇ ತರಗತಿ ಪಠ್ಯ ಪುಸ್ತಕದಿಂದ ನಾರಾಯಣ ಗುರುಗಳ ವಿಷಯ ಕೈ ಬಿಟ್ಟು ಬಿಜೆಪಿ ಸರಕಾರ ಅವರಿಗೆ ಅವಮಾನ ಮಾಡುತ್ತಿದೆ. ಇದರ ವಿರುದ್ದ ಚಳವಳಿ ನಡೆಸಲಾಗುವುದು ಎಂದು ಮಾಜಿ ಶಾಸಕ ಜೆ.ಆರ್.ಲೋಬೋ ಎಚ್ಚರಿಕೆ ನೀಡಿದರು. ಪತ್ರಿಕಾಗೋಷ್ಠಿಯಲ್ಲಿ ಮಾತಾನಾಡಿದ ಅವರು, ಗಣರಾಜ್ಯೋತ್ಸವದಲ್ಲಿ ನಾರಾಯಣಗುರುಗಳ ಸ್ತಬ್ಧಚಿತ್ರಕ್ಕೆ ಅವಕಾಶ ನಿರಾಕರಣೆ ಮಾಡಲಾಯಿತು. ಮಂಗಳೂರು ವಿಮಾನ ನಿಲ್ದಾಣ, ರೈಲು ನಿಲ್ದಾಣಕ್ಕೆ ಅವರ ಹೆಸರಿಡಲು ಒತ್ತಾಯಿಸಿದರೂ ಸರಕಾರ ಸ್ಪಂದಿಸಿಲ್ಲ.‌ ದ.ಕ ದ ಬ್ಯಾಂಕ್ ಗಳ ಹೆಸರು ಕೂಡ ಇಲ್ಲದಂತೆ ಸರಕಾರ ಮಾಡಿದೆ. ಹೆಜ್ಜೆ

ಕೇಂದ್ರ, ರಾಜ್ಯದಿಂದ ನಾರಾಯಣ ಗುರುಗಳಿಗೆ ಹೆಜ್ಜೆಹೆಜ್ಜೆಗೂ ಅವಮಾನ – ಜೆ.ಆರ್ ಲೋಬೊ Read More »

ಬಂಟ್ವಾಳ : ನಿಲ್ಲಿಸಿದ್ದ ಬೈಕ್ ಕದಿಯುತ್ತಿದ್ದ ಮೂವರು ಖದೀಮರ ಬಂಧನ

ಸಮಗ್ರ ನ್ಯೂಸ್: ರಸ್ತೆ ಬದಿ ನಿಲ್ಲಿಸಿದ್ದ ಬೈಕ್ ಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪಿಗಳನ್ನು ಬಂಟ್ವಾಳ ನಗರ ಠಾಣಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಳೆದ ಏಪ್ರಿಲ್ 23 ಮಧ್ಯರಾತ್ರಿ ಬಂಟ್ವಾಳ ತಾಲ್ಲೂಕು ಬಿ ಮೂಡ ಗ್ರಾಮದ ರೈಲ್ವೆ ಸ್ಟೇಷನ್ ಬಳಿ ನಿಲ್ಲಿಸಿದ್ದ ರೈಲ್ವೆ ಇಲಾಖೆಯ ಸಿಬ್ಬಂದಿಯವರಾದ ಅನೂಫ್ ಎಂಬವರ ಬೈಕ್ ಕಳ್ಳತನವಾಗಿತ್ತು ಈ ಬಗ್ಗೆ ಮಂಗಳೂರು ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು . ಕಳೆದ ಏಪ್ರಿಲ್ ಇಪ್ಪತ್ತ ರಂದು ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕಸಬಾ ಗ್ರಾಮದ

ಬಂಟ್ವಾಳ : ನಿಲ್ಲಿಸಿದ್ದ ಬೈಕ್ ಕದಿಯುತ್ತಿದ್ದ ಮೂವರು ಖದೀಮರ ಬಂಧನ Read More »

ಕರ್ನಾಟಕದ ಮೂರು ಜಿಲ್ಲೆಗಳಲ್ಲಿ ಕಬ್ಬಿಣ ಅದಿರು ರಪ್ತಿಗೆ ಸುಪ್ರಿಂ ಗ್ರೀನ್ ಸಿಗ್ನಲ್

ಸಮಗ್ರನ್ಯೂಸ್: ಕರ್ನಾಟಕದ ಬಳ್ಳಾರಿ, ಚಿತ್ರದುರ್ಗ ಮತ್ತು ತುಮಕೂರು ಜಿಲ್ಲೆಗಳ ಗಣಿಗಳಿಂದ ಉತ್ಖನನ ಮಾಡಿದ ಕಬ್ಬಿಣದ ಅದಿರನ್ನು ರಫ್ತು ಮಾಡಲು ಗಣಿಗಾರಿಕೆ ಸಂಸ್ಥೆಗಳಿಗೆ ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ. ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಮತ್ತು ನ್ಯಾಯಮೂರ್ತಿಗಳಾದ ಕೃಷ್ಣ ಮುರಾರಿ ಮತ್ತು ಹಿಮಾ ಕೊಹ್ಲಿ ಅವರನ್ನು ಒಳಗೊಂಡ ಪೀಠವು ಕೇಂದ್ರ ಸರ್ಕಾರದ ನಿಲುವನ್ನು ಗಮನಿಸಿ ಕಬ್ಬಿಣದ ಅದಿರಿನ ರಫ್ತಿನ ಮೇಲಿನ ನಿರ್ಬಂಧವನ್ನು ತೆಗೆದುಹಾಕಿತು ಮತ್ತು ಅಧಿಕಾರಿಗಳು ವಿಧಿಸಿದ ಷರತ್ತುಗಳನ್ನು ಪಾಲಿಸುವಂತೆ ಸಂಸ್ಥೆಗಳಿಗೆ ಸೂಚಿಸಿತು. ಈಗಾಗಲೇ ಅಗೆದ ಕಬ್ಬಿಣದ ಅದಿರು ದಾಸ್ತಾನನ್ನು

ಕರ್ನಾಟಕದ ಮೂರು ಜಿಲ್ಲೆಗಳಲ್ಲಿ ಕಬ್ಬಿಣ ಅದಿರು ರಪ್ತಿಗೆ ಸುಪ್ರಿಂ ಗ್ರೀನ್ ಸಿಗ್ನಲ್ Read More »

“ಹರೀಶ್ ಪೂಂಜಾ ಗೋಣಿಯಲ್ಲಿ‌ ದುಡ್ಡು ತುಂಬಿ ಹಂಚುತ್ತಾರೆ!” | ಕಾರ್ಯಕರ್ತನ ಹೊಗಳಿಕೆ ಬೆಳ್ತಂಗಡಿ ಶಾಸಕರಿಗೆ ಮುಳುವಾಗುತ್ತಾ?

ಸಮಗ್ರ ನ್ಯೂಸ್: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರನ್ನು ಕಾರ್ಯಕರ್ತರೊಬ್ಬರು ಹೊಗಳುವ ಭರದಲ್ಲಿ ಆಡಿದ ಮಾತು ಈಗ ಶಾಸಕರಿಗೆ ಮುಳುವಾಗುವ ಲಕ್ಷಣಗಳು ಕಂಡುಬರುತ್ತಿದೆ. ಬೆಳ್ತಂಗಡಿಯ ಬಳಂಜದಲ್ಲಿ ನಡೆದ ಭಜನೋತ್ಸವ ಕಾರ್ಯಕ್ರಮದ ಸಮಾರೋಪದಲ್ಲಿ ಶಾಸಕ ಹರೀಶ್ ಪೂಂಜಾ ಭಾಗವಹಿಸಿದ್ದರು. ಈ ವೇಳೆ ಅಲ್ಲಿನ ಬಿಜೆಪಿ ಕಾರ್ಯಕರ್ತ ಹರೀಶ್ ವೈ ಚಂದ್ರಮ ಎಂಬವರು ಶಾಸಕರನ್ನು ಹೊಗಳಿದ್ದಾರೆ. ಅವರು ಭಾಷಣ ಮಾಡುವ ಸಂದರ್ಭದಲ್ಲಿ ”ಹರೀಶ್ ಪೂಂಜಾರವರು ಶಾಸಕರ ಮನೆಗೆ ಹೋದವರನ್ನು ಅವರು ಯಾವತ್ತೂ ಬರಿಗೈಲಿ ಕಳಿಸಿಲ್ಲ. ಐದು, ಹತ್ತು ಸಾವಿರದಂತೆ ಕಷ್ಟದಲ್ಲಿರುವವರಿಗೆ ನೀಡುತ್ತಾರೆ.

“ಹರೀಶ್ ಪೂಂಜಾ ಗೋಣಿಯಲ್ಲಿ‌ ದುಡ್ಡು ತುಂಬಿ ಹಂಚುತ್ತಾರೆ!” | ಕಾರ್ಯಕರ್ತನ ಹೊಗಳಿಕೆ ಬೆಳ್ತಂಗಡಿ ಶಾಸಕರಿಗೆ ಮುಳುವಾಗುತ್ತಾ? Read More »

ರೈಲಿನಡಿಗೆ ಬಿದ್ದು ಎಂಬಿಬಿಎಸ್ ವಿದ್ಯಾರ್ಥಿ ಸಾವು

ಸಮಗ್ರ ನ್ಯೂಸ್: ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಯತ್ನಿಸಿದ ಯುವಕನೋರ್ವ ಆಯತಪ್ಪಿ ಬಿದ್ದು ಸಾವನ್ನಪ್ಪಿದ ಘಟನೆ ರಾಯಚೂರು ನಗರ ರೈಲ್ವೆ ನಿಲ್ದಾಣದಲ್ಲಿ ಇಂದು ಬೆಳಗಿನ ಜಾವ ಸಂಭವಿಸಿದೆ.ನಗರದ ಜಹೀರಾಬಾದ್ ನಿವಾಸಿ ವೆಂಕಟೇಶ್ ಮೃತ ಯುವಕ. ಬೆಂಗಳೂರಿನಲ್ಲಿ ಎಂಬಿಬಿಎಸ್ ವಿದ್ಯಾಬ್ಯಾಸ ಮಾಡುತ್ತಿದ್ದ ವೆಂಕಟೇಶ್, ಆಹಾರ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಿರಸ್ತೆದಾರ್ ಸಂಪತ್‌ಕುಮಾರ್ ಎಂಬುವರ ಮಗನಾಗಿದ್ದ. ಅಕ್ಕನ ಮದುವೆಗೆಂದು ಗುರುವಾರ ರಾತ್ರಿ ಬೆಂಗಳೂರಿನಿಂದ ರೈಲಿನ ಮೂಲಕ ರಾಯಚೂರಿಗೆ ಬರುತ್ತಿದ್ದ. ರೈಲು ಬೆಳಗಿನ ಜಾವ 3ರಿಂದ 4 ಗಂಟೆಯ ಸುಮಾರಿಗೆ ರಾಯಚೂರು ನಗರಕ್ಕೆ

ರೈಲಿನಡಿಗೆ ಬಿದ್ದು ಎಂಬಿಬಿಎಸ್ ವಿದ್ಯಾರ್ಥಿ ಸಾವು Read More »

ನೀವು ಬಳಸೋ ಎಣ್ಣೆಯಲ್ಲಿ ಕಡಲೆಯೂ ಇಲ್ಲ, ಸೂರ್ಯಕಾಂತಿಯೂ ಇಲ್ಲ – ಶೋಭಾ ಕರಂದ್ಲಾಜೆ

ಸಮಗ್ರ ನ್ಯೂಸ್: ನೀವು ತಿನ್ನುತ್ತಿರುವ ಸೂರ್ಯಕಾಂತಿ, ಕಡಲೆಕಾಯಿ ಎಣ್ಣೆಯಲ್ಲಿ ಸೂರ್ಯಕಾಂತಿಯೂ ಇಲ್ಲ, ಕಡಲೆ ಬೀಜವೂ ಇಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅಡುಗೆ ತೈಲದ ವಿಚಾರದಲ್ಲಿ ಭಾರತ ಸ್ವಾವಲಂಬಿ ಆಗಬೇಕಿದೆ. ಶೇಕಡ 70ರಷ್ಟು ಎಣ್ಣೆ ವಿದೇಶದಿಂದ ಆಮದಾಗುತ್ತದೆ. ಮಲೇಷಿಯಾ ಹಾಗೂ ಇಂಡೋನೇಷ್ಯಾದಿಂದ ಪಾಮ್ ಆಯಿಲ್ ಬರುತ್ತದೆ. ಅದನ್ನು ಭಾರತದಲ್ಲಿ ರಿಫೈನರಿ ಮಾಡಿ ಬೇರೆ, ಬೇರೆ ಲೇಬಲ್ ಅಂಟಿಸಿ ಮಾರಾಟ ಮಾಡಲಾಗುತ್ತಿದೆ ಎಂದಿದ್ದಾರೆ ತೈಲ ಬೆಳೆಗಳಿಗೆ ಕೇಂದ್ರ ಸರ್ಕಾರ

ನೀವು ಬಳಸೋ ಎಣ್ಣೆಯಲ್ಲಿ ಕಡಲೆಯೂ ಇಲ್ಲ, ಸೂರ್ಯಕಾಂತಿಯೂ ಇಲ್ಲ – ಶೋಭಾ ಕರಂದ್ಲಾಜೆ Read More »

ಕೆನಡಾದಲ್ಲಿ ಕನ್ನಡ ಕಂಪು ಹರಡಿದ ಚಂದ್ರ ಆರ್ಯ| ಸಂಸದರ ಭಾಷಣ ಫುಲ್ ವೈರಲ್

ಸಮಗ್ರ ನ್ಯೂಸ್: ಕೆನಡಾ ಸಂಸತ್‌ನಲ್ಲಿ ಕನ್ನಡದ ಕಂಪು ಹರಡಿದೆ. ಕೆನಡಾ ದೇಶದ ಲಿಬರಲ್‌ ಪಕ್ಷದ ಸಂಸದ ಚಂದ್ರ ಆರ್ಯ ಕನ್ನಡದಲ್ಲಿಯೇ ಮಾತನಾಡುವ ಮೂಲಕ ಕನ್ನಡಿಗರ ಮನ ಗೆದ್ದಿದ್ದಾರೆ.ನಾನು ನನ್ನ ಮಾತೃ ಭಾಷೆಯಾದ ಕನ್ನಡದಲ್ಲಿ ಮಾತನಾಡುತ್ತೇನೆ ಎಂದು ಕೆನಡಾ ಪಾರ್ಲಿಮೆಂಟ್‌ನಲ್ಲಿ ಸಂಸದ ಚಂದ್ರ ಆರ್ಯ ಕನ್ನಡದಲ್ಲಿ ಮಾತನಾಡಿದ್ದಾರೆ. ಮಾನ್ಯ ಸಭಾಪತಿ ಕೆನಡಾ ಸಂಸತ್‌ನಲ್ಲಿ ನನ್ನ ಮಾತೃಭಾಷೆ ಕನ್ನಡದಲ್ಲಿ ಮಾತನಾಡಲು ಅವಕಾಶ ಸಿಕ್ಕಿರುವುದಕ್ಕೆ ನನಗೆ ಸಂತೋಷವಾಗುತ್ತಿದೆ. ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ದ್ವಾರಾಳು ಗ್ರಾಮದ ವ್ಯಕ್ತಿಯೊಬ್ಬ ಕೆನಡಾದಲ್ಲಿ ಸಂಸತ್‌ ಸದಸ್ಯನಾಗಿ

ಕೆನಡಾದಲ್ಲಿ ಕನ್ನಡ ಕಂಪು ಹರಡಿದ ಚಂದ್ರ ಆರ್ಯ| ಸಂಸದರ ಭಾಷಣ ಫುಲ್ ವೈರಲ್ Read More »

ಜೂನ್ ಮೂರನೇ ವಾರದಲ್ಲಿ ಪಿಯುಸಿ ರಿಸಲ್ಟ್| ಸಚಿವ ಬಿ.ಸಿ ನಾಗೇಶ್ ಟ್ವೀಟ್

ಸಮಗ್ರ ನ್ಯೂಸ್: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶದ ಕುರಿತಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಹತ್ವದ ಮಾಹಿತಿ ನೀಡಿದ್ದು, ಜೂನ್ 3 ನೇ ವಾರದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಲು ಗುರಿ ಹೊಂದಲಾಗಿದೆ ಎಂದು ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಚಿವ ಬಿ.ಸಿ.ನಾಗೇಶ್, ದ್ವಿತೀಯ ಪಿಯು ಪರೀಕ್ಷೆ ಸುಸೂತ್ರವಾಗಿ ಮುಗಿದಿದೆ. ಮುಂದಿನ ವಾರದಿಂದ ಮೌಲ್ಯಮಾಪನ ಆರಂಭವಾಗುತ್ತದೆ. ಜೂನ್ 15 ಕ್ಕೆ ಮೌಲ್ಯಮಾಪನ ಕಾರ್ಯ ಪೂರ್ಣಗೊಳಿಸಿ, ಜೂನ್ ಮೂರನೇ ವಾರದಲ್ಲಿ ಫಲಿತಾಂಶ ಪ್ರಕಟಿಸುವ ಗುರಿ

ಜೂನ್ ಮೂರನೇ ವಾರದಲ್ಲಿ ಪಿಯುಸಿ ರಿಸಲ್ಟ್| ಸಚಿವ ಬಿ.ಸಿ ನಾಗೇಶ್ ಟ್ವೀಟ್ Read More »