May 2022

ಕರಾವಳಿಯಲ್ಲಿ ಮೇ.19ರವರೆಗೆ ಭಾರೀ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಹಿನ್ನಲೆಯಲ್ಲಿ ಮೀನುಗಾರರು ಸಮುದ್ರ ಮತ್ತು ನದಿಗೆ ಇಳಿಯದಂತೆ ಮುನ್ಸೂಚನೆ ನೀಡಲಾಗಿದೆ. ಉಡುಪಿ ಹಾಗೂ ದ.ಕನ್ನಡ ಜಿಲ್ಲೆಗಳಲ್ಲಿ ಈ ಕುರಿತು ಅಲರ್ಟ್ ಘೋಷಣೆ ಮಾಡಲಾಗಿದ್ದು, ಮೇ 17 ಮತ್ತು 19ರಂದು ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಮೇ 18ರಂದು ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದ್ದು, ಗಾಳಿ‌ ಸಹಿತ ಭಾರೀ‌ ಮಳೆಯಾಗುವ ಸಂಭವವಿದೆ. ರಾಜ್ಯದಲ್ಲಿ ಹಿಂಗಾರು […]

ಕರಾವಳಿಯಲ್ಲಿ ಮೇ.19ರವರೆಗೆ ಭಾರೀ ಮಳೆ ಸಾಧ್ಯತೆ Read More »

ಮಂಗಳೂರು: ಮಳಲಿ ದರ್ಗಾದೊಳಗೆ ದೇವಸ್ಥಾನ ಪತ್ತೆ ಪ್ರಕರಣ| ವಿಎಚ್ ಪಿ ಯಿಂದ ಅಷ್ಟಮಂಗಲ ಪ್ರಶ್ನೆಗೆ ಚಿಂತನೆ

ಸಮಗ್ರ ನ್ಯೂಸ್: ನವೀಕರಣಕ್ಕಾಗಿ ದರ್ಗಾ ಕೆಡವಿದಾಗ ದೇವಸ್ಥಾನದ ಮಾದರಿ ಪತ್ತೆ ವಿಚಾರವಾಗಿ ಹಿಂದು ಸಂಘಟನೆಗಳು ಅಷ್ಟಮಂಗಲ ಪ್ರಶ್ನೆ ಮೊರೆ ಹೋಗಿದ್ದಾರೆ. ನಗರದ ಹೊರವಲಯದ ಗಂಜಿಮಠ ಬಳಿಯ ಮಳಲಿ ಎಂಬಲ್ಲಿನ ದರ್ಗಾವನ್ನು ನವೀಕರಣಕ್ಕಾಗಿ ಕೆಡವಿದಾಗ ದೇವಸ್ಥಾನದ ಮಾದರಿ ಪತ್ತೆಯಾಗಿತ್ತು. ಈ ಸಂಬಂಧ ಕೋರ್ಟ್ ನಿಂದ ಕಾಮಗಾರಿಗೆ ತಡೆಯಾಜ್ಞೆ ನೀಡಿತ್ತು. ಸದ್ಯ ಅಲ್ಲಿ ಪತ್ತೆಯಾಗಿರೊದು ದರ್ಗಾನಾ, ದೇವಸ್ಥಾನನಾ, ಬಸದಿನಾ ಅನ್ನೊ ಗೊಂದಲ ಸೃಷ್ಟಿಯಾಗಿದೆ. ಈ ವಿಚಾರವಾಗಿ ಹಿಂದು ಸಂಘಟನೆಗಳು ಅಷ್ಟಮಂಗಲ ಪ್ರಶ್ನೆ ಮೊರೆ ಹೋಗಿದ್ದಾರೆ. ಅಷ್ಟಮಂಗಲ ಪ್ರಶ್ನೆ ಮೊರೆ ಹೋಗಲು

ಮಂಗಳೂರು: ಮಳಲಿ ದರ್ಗಾದೊಳಗೆ ದೇವಸ್ಥಾನ ಪತ್ತೆ ಪ್ರಕರಣ| ವಿಎಚ್ ಪಿ ಯಿಂದ ಅಷ್ಟಮಂಗಲ ಪ್ರಶ್ನೆಗೆ ಚಿಂತನೆ Read More »

ಮಂಗಳೂರು ರೈಲ್ವೆ ನಿಲ್ದಾಣದಲ್ಲಿ 3.37ಕೆಜಿ ಗಾಂಜಾ ಸಹಿತ ಇಬ್ಬರು ಅಂದರ್

ಸಮಗ್ರ ನ್ಯೂಸ್: ಮಂಗಳೂರು ನಗರದ ಸೆಂಟ್ರಲ್‌ ರೈಲ್ವೇ ನಿಲ್ದಾಣ ಬಳಿ 3. 375 ಕೆ.ಜಿ. ಗಾಂಜಾ ಸಹಿತ ಇಬ್ಬರನ್ನು ಮಂಗಳೂರು ದಕ್ಷಿಣ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಮೇ 5ರಂದು ರಾತ್ರಿ 9 ಗಂಟೆಯ ಸುಮಾರಿಗೆ ಕಾರ್ಯಾಚರಣೆ ನಡೆಸಿದ ಪೊಲೀಸ್‌ ಉಪನಿರೀಕ್ಷಕ ಶೀತಲ್‌ ಅಲಗೂರ್‌ ಅವರ ನೇತೃತ್ವದ ತಂಡ ಸೆಂಟ್ರಲ್‌ ರೈಲ್ವೇ ಕಾಲನಿಯ 2ನೇ ಗೇಟ್‌ ಬಳಿ ಕೇರಳದ ಮಹಮ್ಮದ್‌ ಮುಸ್ತಾಫ‌ ಮತ್ತು ಮಹಮ್ಮದ್‌ ಜಜಿಲ್‌ನನ್ನು ಬಂಧಿಸಿದೆ.

ಮಂಗಳೂರು ರೈಲ್ವೆ ನಿಲ್ದಾಣದಲ್ಲಿ 3.37ಕೆಜಿ ಗಾಂಜಾ ಸಹಿತ ಇಬ್ಬರು ಅಂದರ್ Read More »

ಸಭಾಪತಿ ಸ್ಥಾನಕ್ಕೆ ಹೊರಟ್ಟಿ‌ ರಾಜೀನಾಮೆ| ನಾಳೆ‌ ಬಿಜೆಪಿಗೆ ಅಧಿಕೃತ ಸೇರ್ಪಡೆ

ಸಮಗ್ರ ನ್ಯೂಸ್: ವಿಧಾನ ಪರಿಷತ್ ಸಭಾಪತಿ ಹಾಗೂ ಪರಿಷತ್ ಸದಸ್ಯ ಸ್ಥಾನಕ್ಕೆ ಬಸವರಾಜ ಹೊರಟ್ಟಿಯವರು ರಾಜೀನಾಮೆ ನೀಡಿದ್ದಾರೆ. ಅಲ್ಲದೇ ನಾಳೆ ಅಧಿಕೃತವಾಗಿ ಬಿಜೆಪಿ ಪಕ್ಷವನ್ನು ಸೇರ್ಪಡೆಗೊಳ್ಳೋದಾಗಿ ತಿಳಿಸಿದ್ದಾರೆ. ಈ ಕುರಿತಂತೆ ಮಾತನಾಡಿದಂತ ಅವರು, ಸಭಾಪತಿ ಹಾಗೂ ಪರಿಷತ್ ಸದಸ್ಯ ಸ್ಥಾನ ಎರಡಕ್ಕೂ ವಿಧಾನ ಪರಿಷತ್ ಕಾರ್ಯದರ್ಶಿಯವರಿಗೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದೇನೆ. ನಾಳೆ ಬಿಜೆಪಿ ಪಕ್ಷವನ್ನು ಸೇರ್ಪಡೆಗೊಳ್ಳುವುದಾಗಿ ತಿಳಿಸಿದ್ದಾರೆ. ಇನ್ನೂ ನಿಯಮದ ಪ್ರಕಾರ ಸಭಾಪತಿ ಸ್ಥಾನಕ್ಕೆ ರಾಜೀನಾಮೆಯನ್ನು ಉಪ ಸಭಾಪತಿಗಳಿಗೆ ಸಲ್ಲಿಸಬೇಕು. ಆದರೆ ಉಪ ಸಭಾಪತಿ ಸ್ಥಾನ

ಸಭಾಪತಿ ಸ್ಥಾನಕ್ಕೆ ಹೊರಟ್ಟಿ‌ ರಾಜೀನಾಮೆ| ನಾಳೆ‌ ಬಿಜೆಪಿಗೆ ಅಧಿಕೃತ ಸೇರ್ಪಡೆ Read More »

ಮಂಡ್ಯದ ಹೈಕ್ಳಿಗೆ ಥ್ಯಾಂಕ್ಸ್ ಹೇಳಿದ ಸನ್ನಿ ಲಿಯೋನ್

ಸಮಗ್ರ ನ್ಯೂಸ್: ಮಂಡ್ಯದಲ್ಲಿ ತಮ್ಮ ಅಭಿಮಾನಿಗಳಿಗೆ ನಟಿ ಸನ್ನಿಲಿಯೋನ್ ಧನ್ಯವಾದ ಅರ್ಪಿಸಿದ್ದಾರೆ. ಇತ್ತೀಚಿಗಷ್ಟೇ ಮಂಡ್ಯದ ಯುವಕರು ಸನ್ನಿ ಲಿಯೋನ್ ಬರ್ತ್ ಡೇ ಆಚರಿಸಿದ್ದರು. ಅದು ಮಾಧ್ಯಮಗಳಲ್ಲೂ ವರದಿಯಾಗಿತ್ತು. ಆ ವರದಿಯ ಪೇಪರ್‌ ಕಟಿಂಗ್‌ಗಳನ್ನು ತಮ್ಮ ಟ್ವಿಟರ್ ಖಾತೆಯಲ್ಲಿ ಶೇರ್ ಮಾಡಿರುವ ಸೇಸಮ್ಮ, ಅಭಿಮಾನಿಗಳಿಗೆ ಥ್ಯಾಂಕ್ಸ್ ಎಂದಿದ್ದಾರೆ. ಮೇ 13ರಂದು ಸನ್ನಿ ಲಿಯೋನ್ ಅವರ 41ನೇ ವರ್ಷದ ಹುಟ್ಟುಹಬ್ಬವಿತ್ತು. ಅಂದು ಮಂಡ್ಯದ ಹಳ್ಳಿಯೊಂದರಲ್ಲಿ ಸ್ಪೆಷಲ್ ಆಗಿ ಸನ್ನಿ ಬರ್ತ್ ಡೇ ಆಚರಿಸಲಾಗಿತ್ತು. ಯುವಕರು ರಕ್ತದಾನ ಶಿಬಿರವನ್ನು ಆಯೋಜಿಸಿದ್ದರು. ಕೊಮ್ಮೇರಹಳ್ಳಿ

ಮಂಡ್ಯದ ಹೈಕ್ಳಿಗೆ ಥ್ಯಾಂಕ್ಸ್ ಹೇಳಿದ ಸನ್ನಿ ಲಿಯೋನ್ Read More »

ದತ್ತಪೀಠದ ಬಳಿ ಬಿರಿಯಾನಿ ಬಾಡೂಟ| ಹಿಂದೂ ಸಂಘಟನೆಗಳ‌ ಆಕ್ರೋಶ

ಸಮಗ್ರ ನ್ಯೂಸ್: ಚಂದ್ರದ್ರೋಣ ಪರ್ವತಶ್ರೇಣಿಯಲ್ಲಿರುವ ಬಾಬಾಬುಡನ್​ಗಿರಿಯ ಶ್ರೀಗುರುದತ್ತಾತ್ರೇಯ ಪೀಠದ ಸ್ಥಳ ಮತ್ತೆ ಚರ್ಚೆಗೆ ಕಾರಣವಾಗಿದೆ. ದತ್ತಪೀಠದ ಹೋಮ-ಹವನ ನಡೆಯುವ ಜಾಗದಲ್ಲಿ ಮಾಂಸಹಾರ ಮಾಡಿರೋದು ಸದ್ಯ ಹಿಂದೂಪರ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ. ವಿವಾದಿತ ಜಾಗದಲ್ಲಿ ಕೋರ್ಟ್ ಆದೇಶ ಉಲ್ಲಂಘನೆ ಮಾಡಿರುವ ಸಮುದಾಯದ ಕೆಲವರು ಹೋಮ-ಹವನ ನಡೆಯುವ ಸ್ಥಳದಲ್ಲಿ ತಾತ್ಕಾಲಿಕ ಶೆಡ್ ಹಾಕಿ ಮಾಂಸಹಾರ ತಯಾರಿಸಿದ್ದಾರೆ. ಅಲ್ಲದೇ ದತ್ತಪೀಠದ ಗೋರಿಗಳಿಗೆ ಪೂಜೆ ಮಾಡಿದ್ದಾರೆ ಎಂದು ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಆರೋಪ ಮಾಡಿದ್ದಾರೆ. ಹೋಮ-ಹವನ ನಡೆಯುವ ಸ್ಥಳದಲ್ಲಿ ಬಿರಿಯಾನಿ ತಯಾರು

ದತ್ತಪೀಠದ ಬಳಿ ಬಿರಿಯಾನಿ ಬಾಡೂಟ| ಹಿಂದೂ ಸಂಘಟನೆಗಳ‌ ಆಕ್ರೋಶ Read More »

ಮಡಿಕೇರಿ: ಶಾಲಾ ಆವರಣದಲ್ಲಿ ತ್ರಿಶೂಲ ದೀಕ್ಷೆ, ಬಂದೂಕು ತರಬೇತಿ

ಸಮಗ್ರ ನ್ಯೂಸ್: ಪೊನ್ನಂಪೇಟೆಯ ಖಾಸಗಿ ಶಾಲೆಯೊಂದರಲ್ಲಿ ಇತ್ತೀಚೆಗೆ ಸಂಘ ಪರಿವಾರ, ಭಜರಂಗದಳದಿಂದ ಏರ್ಪಡಿಸಲಾಗಿದ್ದ ಶೌರ್ಯ ಶಿಬಿರ ಕಾರ್ಯಕ್ರಮ ತೀವ್ರ ವಿವಾದಕ್ಕೀಡಾಗಿದ್ದು, ಶಿಬಿರದಲ್ಲಿ ಕಾರ್ಯಕರ್ತರಿಗೆ ಬಂದೂಕು ತರಬೇತಿ, ತ್ರಿಶೂಲ ದೀಕ್ಷೆ ನೀಡಲಾಗಿದೆ. ಶ್ರೀಸಾಯಿ ಶಂಕರ ವಿದ್ಯಾ ಮಂದಿರದಲ್ಲಿ ಶೌರ್ಯ ಪ್ರಶಿಕ್ಷಣವರ್ಗ ಶಿಬಿರ ಎಂಬ ತರಬೇತಿ ಕಾರ್ಯಕ್ರಮ ನಡೆಸಲಾಗಿದ್ದು, ಈ ವೇಳೆ 50ಕ್ಕೂ ಹೆಚ್ಚು ಕಾರ್ಯಕರ್ತರಿಗೆ ಶಾಲೆಯಲ್ಲಿ ತ್ರಿಶೂಲ ದೀಕ್ಷೆ, ಏರ್ ರೈಫಲ್ ಮೂಲಕ ಬಂದೂಕು ತರಬೇತಿ ನೀಡಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಕುರಿತ ಫೋಟೋಗಳು ವೈರಲ್ ಆಗಿದ್ದು, ಇಂತಹ

ಮಡಿಕೇರಿ: ಶಾಲಾ ಆವರಣದಲ್ಲಿ ತ್ರಿಶೂಲ ದೀಕ್ಷೆ, ಬಂದೂಕು ತರಬೇತಿ Read More »

ನಾಳೆ(ಮೇ.17) ರಾಜ್ಯಾದ್ಯಂತ ಆಶಾ ಕಾರ್ಯಕರ್ತೆಯರ ಪ್ರತಿಭಟನೆ

ಸಮಗ್ರ ನ್ಯೂಸ್: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಆಶಾ ಕಾರ್ಯಕರ್ತೆಯರು ನಾಳೆ(ಮೇ.18) ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಪ್ರೋತ್ಸಾಹಧನ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಲಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಯಲಿದೆ. ಕಳೆದ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹ ಧನ ಹೆಚ್ಚಳ ಮಾಡಿಲ್ಲ. ಸರ್ಕಾರ ಕೆಲಸಕ್ಕೆ ತಕ್ಕ ಸಂಬಳ ಕೊಡದೇ ಅನ್ಯಾಯ ಮಾಡಿದೆ. ಹೀಗಾಗಿ ರಾಜ್ಯ ಸರ್ಕಾರ ಪ್ರೋತ್ಸಾಹಧನ ಹೆಚ್ಚಳ ಮಾಡುವಂತೆ ಒತ್ತಾಯಿಸಿ ಬೃಹತ್

ನಾಳೆ(ಮೇ.17) ರಾಜ್ಯಾದ್ಯಂತ ಆಶಾ ಕಾರ್ಯಕರ್ತೆಯರ ಪ್ರತಿಭಟನೆ Read More »

ಭಾರೀ ಮಳೆ ಸಾಧ್ಯತೆ; ಮುಂದಿನ 4 ದಿನ ಅಲರ್ಟ್

ಸಮಗ್ರ ನ್ಯೂಸ್: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು,ರಾಜ್ಯದಲ್ಲಿ‌ ಮೇ 18 ರಿಂದ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಮತ್ತು ಹಾಸನದಲ್ಲಿ ಮೇ 16, 17ರಂದು ಗುಡುಗು ಮಿಂಚು ಸಹಿತ ಧಾರಾಕಾರ ಮಳೆ ಬೀಳುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಅಲ್ಲದೆ, ಮೇ,18,19ರಂದು ಈ ಜಿಲ್ಲೆಗಳಲ್ಲಿ ಇನ್ನಷ್ಟು ಹೆಚ್ಚು ಮಳೆ ಬೀಳಲಿದ್ದು, ಆರೆಂಜ್ ಅಲರ್ಟ್ ಘೋಷಿಸಿದೆ. ಬೆಂಗಳೂರು, ಬೆಂ.ಗ್ರಾಮಾಂತರ,

ಭಾರೀ ಮಳೆ ಸಾಧ್ಯತೆ; ಮುಂದಿನ 4 ದಿನ ಅಲರ್ಟ್ Read More »

ಸ್ವತಂತ್ರ ‌ಪತ್ರಿಕೋದ್ಯಮದ ಒಂದನೇ ವರ್ಷ; ನೂರಾರು ಹರ್ಷ

ಸಮಗ್ರ ನ್ಯೂಸ್: ಮಾಧ್ಯಮ ಅಥವಾ ಸಮೂಹ ಮಾಧ್ಯಮಗಳೆಂದು ಬಂದಾಗ ಸಾಮಾನ್ಯವಾಗಿ ಪತ್ರಿಕೆ, ಬಾನುಲಿ ಮತ್ತು ದೂರದರ್ಶನಗಳನ್ನು ಸೇರಿಸಿ ಹೇಳುತ್ತಾರೆ. ಇತ್ತೀಚಿನ ದಿನಗಳಲ್ಲಿ ಮಾಧ್ಯಮಗಳು ಎನಿಸಿಕೊಂಡ ಇವುಗಳಿಗೆ ಸೆಡ್ಡು ಹೊಡೆದು ಮಾಹಿತಿಯನ್ನು, ಮನೋರಂಜನೆಯನ್ನು, ದೃಶ್ಯ, ಸುದ್ದಿ ಎಲ್ಲವನ್ನೂ ಕ್ಷಣಮಾತ್ರದಲ್ಲಿ ತಲುಪಿಸಬಲ್ಲ ಮತ್ತೊಂದು ನವಮಾದ್ಯಮ ಎಂದರೆ ಡಿಜಿಟಲ್ ಪತ್ರಿಕೋದ್ಯಮ. ನ್ಯಾಯಾಂಗ, ಕಾರ್ಯಾಂಗ ಮತ್ತು ಶಾಸಕಾಂಗಗಳಂತೆ, ಪ್ರಜಾಪ್ರಭುತ್ವದ ಒಂದು ಪ್ರಮುಖ ಅಂಗವಾಗಿ ಮಾಧ್ಯಮವು ಕಾರ್ಯನಿರ್ವಹಿಸುತ್ತದೆ. ಅಂತೆಯೇ ಮಾಧ್ಯಮವನ್ನು “ನಾಲ್ಕನೇ ಅಂಗ” ಎಂದೂ ಕರೆಯುತ್ತಾರೆ. ಈ ನಾಲ್ಕನೇ ಅಂಗಕ್ಕೆ ಹೊಸದಾಗಿ ಸೇರ್ಪಡೆಯಾದ ಡಿಜಿಟಲ್

ಸ್ವತಂತ್ರ ‌ಪತ್ರಿಕೋದ್ಯಮದ ಒಂದನೇ ವರ್ಷ; ನೂರಾರು ಹರ್ಷ Read More »