ಸಮಗ್ರ ನ್ಯೂಸ್: ಕರ್ನಾಟಕದ ಎರಡನೇ ಶಕ್ತಿ ಕೇಂದ್ರ ಎಂಬ ಹೆಗ್ಗಳಿಕೆ ಹೊಂದಿರುವ ಬೆಳಗಾವಿ ಸುವರ್ಣಸೌಧದ ಮುಂದೆ ಶಾವಿಗೆ ಒಣಹಾಕಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಬೆಳಗಾವಿ ತಾಲೂಕಿನ ಹಲಗಾ ಮತ್ತು ಬಸ್ತವಾಡ ಗ್ರಾಮದ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಉತ್ತರ ಕರ್ನಾಟಕದ ಅಭಿವೃದ್ಧಿಗೆ ಪೂರಕವಾಗಲೆಂಬ ಕಾರಣಕ್ಕೆ 400ಕ್ಕೂ ಅಧಿಕ ಕೋಟಿ ರೂಪಾಯಿ ಖರ್ಚು ಮಾಡಿ ಸುವರ್ಣ ಸೌಧ ನಿರ್ಮಾಣ ಮಾಡಲಾಗಿದೆ.
ಆದರೆ ಸುವರ್ಣಸೌಧದಲ್ಲಿ ಸಂಡಿಗೆ, ಶಾವಿಗೆ ಒಣಗಿಸಲು ಹಾಕಿರುವುದು ಜಿಲ್ಲಾಡಳಿತದ ನಿರ್ಲಕ್ಷ್ಯಕ್ಕೆ ಕಾರಣವಾಗಿದೆ.
ಸುವರ್ಣ ಸೌಧದ ಪ್ರವೇಶ ದ್ವಾರದ ಮೆಟ್ಟಿಲುಗಳ ಬಳಿಯೇ ಈ ಸಂಡಿಗೆ, ಶಾವಿಗೆ, ಹಪ್ಪಳವನ್ನು ಬಿಸಿಲಿನಲ್ಲಿ ಒಣ ಹಾಕಿದ್ದು, ಸಾಮಾಜಿಕ ಜಾಲತಾಣದಲ್ಲಿ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.