Ad Widget .

‘ಗೆಳೆಯನಿಗಾಗಿ ಗಡಿದಾಟಿದ ಪ್ರೀತಿ’| ಬಾಂಗ್ಲಾದಿಂದ ಭಾರತಕ್ಕೆ ಈಜಿದ ಯುವತಿ…!

ಸಮಗ್ರ ನ್ಯೂಸ್: ಪ್ರೀತಿಸಿದವರನ್ನು ಪಡೆಯಲು ಜನರು ಏನೆಲ್ಲ ಮಾಡುತ್ತಾರೆ ಎಂಬುದಕ್ಕೆ ಈ ಘಟನೆ ಉತ್ತಮ ಉದಾಹರಣೆಯಾಗಿದೆ. ಯುವತಿಯೋರ್ವಳು ಪ್ರೀತಿಸಿದ ಯುವಕನನ್ನು ಮದುವೆಯಾಗಲೂ ಬಾಂಗ್ಲಾದಿಂದ ಭಾರತದವರೆಗೆ ನದಿಯಲ್ಲಿ ಈಜಿಕೊಂಡು ಬಂದಿದ್ದಾರೆ.

Ad Widget . Ad Widget .

ಬಾಂಗ್ಲಾದೇಶ ಅಭಿಕ್ ಮಂಡಲ್ (22) ಎಂಬ ಯುವತಿಯೋರ್ವಳು ಭಾರತದಲ್ಲಿರುವ ತನ್ನ ಗೆಳೆಯನನ್ನು ಮದುವೆಯಾಗಲು ಗಡಿಯಾಚೆ ಈಜಿದ್ದಾಳೆ. ಆಶ್ಚರ್ಯ ಆದ್ರೂ ಇದು ಸತ್ಯ. ಈ ಯುವತಿ ಬಾಂಗ್ಲಾದೇಶದಿಂದ ಭಾರತದವರೆಗೆ ಬರಲು ಒಂದು ಗಂಟೆಗಳ ಕಾಲ ಈಜಿ ದಡ ಸೇರಿದ್ದಾಳೆ.

Ad Widget . Ad Widget .

ಕೃಷ್ಣ ಮಂಡಲ್ ಅವರು ಅಭಿಕ್ ಮಂಡಲ್ ಎಂಬುವವರನ್ನು ಫೇಸ್‌ಬುಕ್‌ನಲ್ಲಿ ಪರಿಚಿತರಾಗಿ ಪರಸ್ಪರ ಇಬ್ಬರು ಪ್ರೀತಿಸುತ್ತಿದ್ದರು. ಕೃಷ್ಣ ಅವರ ಬಳಿ ಪಾಸ್‌ಪೋರ್ಟ್ ಇಲ್ಲದ ಕಾರಣ ಅಕ್ರಮವಾಗಿ ಗಡಿ ದಾಟಲು ನಿರ್ಧರಿಸಿದ್ದರು. ಪೊಲೀಸ್ ಮೂಲಗಳ ಪ್ರಕಾರ, ಕೃಷ್ಣ ಮೊದಲು ರಾಯಲ್ ಬೆಂಗಾಲ್ ಟೈಗರ್ಸ್‌ಗೆ ಹೆಸರುವಾಸಿಯಾದ ಸುಂದರಬನ್ಸ್‌ ಪ್ರವೇಶಿಸಿ, ನಂತರ ತನ್ನ ಗಮ್ಯಸ್ಥಾನವನ್ನು ತಲುಪಲು ನದಿಯಲ್ಲಿ ಸುಮಾರು ಒಂದು ಗಂಟೆ ಈಜಿದ್ದಾಳೆ ಎನ್ನಲಾಗುತ್ತಿದೆ.

ಇದಾದ ಮೂರು ದಿನಗಳ ನಂತರ ಕೋಲ್ಕತ್ತಾದ ಕಾಳಿಘಾಟ್ ದೇವಸ್ಥಾನದಲ್ಲಿ ಕೃಷ್ಣ ಅಭಿಕ್ ಅವರನ್ನು ವಿವಾಹವಾದರು. ಆದರೆ, ಅಕ್ರಮವಾಗಿ ದೇಶ ಪ್ರವೇಶಿಸಿದ್ದಕ್ಕಾಗಿ ಆಕೆಯನ್ನು ಸೋಮವಾರ ಬಂಧಿಸಲಾಯಿತು. ಕೃಷ್ಣ ಅವರನ್ನು ಬಾಂಗ್ಲಾದೇಶ ಹೈಕಮಿಷನ್‌ಗೆ ಹಸ್ತಾಂತರಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

Leave a Comment

Your email address will not be published. Required fields are marked *