ರಾಜಧಾನಿ ಸೇರಿದಂತೆ 50 ಕಡೆ ಐಟಿ‌ ದಾಳಿ| ಹಲವು ತಿಮಿಂಗಿಲಗಳಿಗೆ ಬಲೆ

ಸಮಗ್ರ ನ್ಯೂಸ್: ಸಿಲಿಕಾನ್ ಸಿಟಿಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ 50ಕ್ಕೂ ಹೆಚ್ಚು ಕಡೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬೃಹತ್ ದಾಳಿ ನಡೆಸಿದ್ದು, ಬೆಳ್ಳಂ ಬೆಳಗ್ಗೆ ಉದ್ಯಮಿಗಳಿಗೆ ಬಿಸಿ ಮುಟ್ಟಿಸಿದ್ದಾರೆ.

Ad Widget ... ..

600ಕ್ಕೂ ಹೆಚ್ಚು ಅಧಿಕಾರಿಗಳ ತಂಡದಿಂದ ಮನೆ, ಕಚೇರಿಗಳ ಮೇಲೆ ದಾಳಿ ನಡೆಸಲಾಗಿದ್ದು, ಸರ್ಚ್ ವಾರೆಂಟ್ ತಂದು ಮನೆ ಹಾಗೂ ಕಚೇರಿಗಳನ್ನು ಐಟಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

Ad Widget

ಆದಾಯ ಮರೆಮಾಚಿ ಐಟಿ ರಿಟರ್ನ್ಸ್ ಸಲ್ಲಿಕೆ ಹಿನ್ನೆಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದ್ದು, ಐಟಿ ರಿಟರ್ನ್ಸ್ ಸಲ್ಲಿಕೆಗಿಂತ ಹೆಚ್ಚಿನ ಆದಾಯ ಹೊಂದಿರೋದನ್ನ ಪತ್ತೆ ಮಾಡಿ ದಾಳಿ ಮಾಡಲಾಗಿದೆ ಎನ್ನಲಾಗಿದೆ.

ಗೋವಾ – ಕರ್ನಾಟಕ ಅಧಿಕಾರಿಗಳ ತಂಡ ದಾಳಿಯಲ್ಲಿ ಭಾಗಿಯಾಗಿದ್ದು, ಲೆಕ್ಕಪತ್ರಗಳ ಶೋಧನೆ ನಡೆಸುತ್ತಿದ್ದಾರೆ. ಬೆಂಗಳೂರಿನ ಸದಾಶಿವನಗರದ ಎಂಬೆಸ್ಸಿ ಆರ್ಕೆಡ್ ಅಪಾರ್ಟ್​ಮೆಂಟ್​​ನ ನರಪತ್ ಸಿಂಗ್ ಚರೋಡಿಯ ಎಂಬುವರ ನಂಬರ್ 607ರ ಫ್ಲ್ಯಾಟ್ ಮೇಲೆ ದಾಳಿ ನಡೆಸಲಾಗಿದೆ. ನಾಲ್ವರು ಅಧಿಕಾರಿಗಳ ತಂಡ ಮನೆಯಲ್ಲಿ ತಪಾಸಣೆ ನಡೆಸಲಾಗುತ್ತಿದೆ

Leave a Comment

Your email address will not be published. Required fields are marked *