Ad Widget .

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ವಂದಿತಾ ಶರ್ಮಾ ಅಧಿಕಾರ ಸ್ವೀಕಾರ| ಶಕ್ತಿಕೇಂದ್ರದಲ್ಲಿ ಹೆಣ್ಮಕ್ಳೇ ಸ್ಟ್ರಾಂಗು ಗುರೂ!!

ಸಮಗ್ರ ನ್ಯೂಸ್: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಹಿರಿಯ ಅಧಿಕಾರಿ ವಂದಿತಾ ಶರ್ಮಾ ಅಧಿಕಾರ ಸ್ವೀಕರಿಸಿದ್ದಾರೆ. ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್ ಅವರ ವಯೋ ನಿವೃತ್ತಿಯಿಂದ ತೆರವಾದ ಹುದ್ದೆಗೆ ಕರ್ನಾಟಕ ವೃಂದದ ಭಾರತೀಯ ಆಡಳಿತ ಸೇವೆಯ 1986 ನೇ ಸಾಲಿನ ತಂಡದ ವಂದಿತಾ ಶರ್ಮಾ ಅವರನ್ನು ನೇಮಕ ಮಾಡಲಾಗಿತ್ತು.

Ad Widget . Ad Widget .

ಇದೀಗ ಮುಖ್ಯಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸಿದ್ದು, ಈ ಮೂಲಕ ವಂದಿತಾ ಶರ್ಮಾ ಅವರು ರಾಜ್ಯದಲ್ಲಿ ಮುಖ್ಯ ಕಾರ್ಯದರ್ಶಿ ಹುದ್ದೆಯನ್ನು ಅಲಂಕರಿಸುತ್ತಿರುವ ನಾಲ್ಕನೇ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

Ad Widget . Ad Widget .

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹುದ್ದೆಯನ್ನು ಈ ಹಿಂದೆ 2000 ನೇ ಇಸವಿಯಲ್ಲಿ ತೆರೇಸಾ ಭಟ್ಟಾಚಾರ್ಯ, 2006 ನೇ ಇಸವಿಯಲ್ಲಿ ಮಾಲತಿ ದಾಸ್ ಹಾಗೂ 2017 ನೇ ಇಸವಿಯಲ್ಲಿ ಕೆ. ರತ್ನ ಪ್ರಭ ಅವರೂ ಅಲಂಕರಿಸಿದ್ದರು.

ಕೆ. ರತ್ನ ಪ್ರಭ ಅವರ ಅಧಿಕಾರಾವಧಿಯಲ್ಲಿ ರಾಜ್ಯ ಪೋಲಿಸ್ ಮಹಾನಿರ್ದೇಶಕ ಹಾಗೂ ಮಹಾ ನಿರೀಕ್ಷಕ ಹುದ್ದೆಯನ್ನು ನೀಲಮಣಿ ಎನ್ ರಾಜು ಅಲಂಕರಿಸಿದಾಗ ಎರಡು ಪ್ರಮುಖ ಹುದ್ದೆಗಳಲ್ಲಿ ಮಹಿಳೆಯರೇ ಇದ್ದಾರೆ ಎಂಬುದು ಗಮನಾರ್ಹವಾಗಿತ್ತು. ಇದೀಗ ವಂದಿತಾ ಶರ್ಮಾ ಅವರು ರಾಜ್ಯದ ಮುಖ್ಯ ಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸುವುದರೊಂದಿಗೆ ರಾಜ್ಯದ ಶಕ್ತಿ ಕೇಂದ್ರ ವಿಧಾನಸೌಧದಲ್ಲಿ ಇರುವ ಮೂರೂ ಪ್ರಮುಖ ಹುದ್ದೆಗಳನ್ನು ಮಹಿಳೆಯರೇ ಅಲಂಕರಿಸಿದಂತಾಗಿದೆ.

Leave a Comment

Your email address will not be published. Required fields are marked *