ಸಮಗ್ರ ನ್ಯೂಸ್: ಕಾಂಗ್ರೆಸ್ ನಾಯಕ, ಸುಪ್ರೀಂ ಕೋರ್ಟ್ ವಕೀಲ ಬ್ರಿಜೇಶ್ ಕಾಳಪ್ಪ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದಾರೆ. ಕೆಪಿಸಿಸಿ ವಕ್ತಾರರಾಗಿದ್ದ ಬ್ರಿಜೇಶ್ ಕಾಳಪ್ಪ ಅವರು ಪರಿಷತ್ ಟಿಕೆಟ್ ಆಕಾಂಕ್ಷಿಯಾಗಿದ್ದರು.
ಅವಕಾಶ ಕೈ ತಪ್ಪಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ನೇರವಾಗಿ ಪತ್ರ ಬರೆದು ತನ್ನ ನಿರ್ಧಾರವನ್ನು ತಿಳಿಸಿದ್ದಾರೆ. ಬ್ರಿಜೇಶ್ ಕಾಳಪ್ಪ ಆಮ್ ಆದ್ಮಿ ಪಕ್ಷವನ್ನು ಸೇರುವ ಸಾಧ್ಯತೆಯಿದೆ.
ರಾಜೀನಾಮೆ ಪತ್ರದಲ್ಲಿ, ಗೌರವಾನ್ವಿತ ಮೇಡಂ, ಆರಂಭದಲ್ಲಿ ನೀವು ನನಗೆ ಒದಗಿಸಿದ ಹಲವಾರು ಅವಕಾಶಗಳಿಗಾಗಿ ನಾನು ನಿಮಗೆ ನನ್ನ ಹೃತ್ಪೂರ್ವಕ ಧನ್ಯವಾದಗಳನ್ನು ಅರ್ಪಿಸಲು ಬಯಸುತ್ತೇನೆ ಎಂದು ತಿಳಿಸಿದ್ದಾರೆ.