ಸಮಗ್ರ ನ್ಯೂಸ್: ಹೊಟ್ಟೆನೋವು ಎಂದು ಜಿಲ್ಲಾ ಆಸ್ಪತ್ರೆಗೆ ಬಂದ ಬಾಲಕಿಯೊಬ್ಬಳು ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿದ ಬಳಿಕ ಪರಾರಿಯಾದ ಘಟನೆ ನೋಯ್ಡಾದಲ್ಲಿ ನಡೆದಿದೆ.
ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿದ ಸುದ್ದಿ ಆಸ್ಪತ್ರೆಯಲ್ಲಿ ಸಂಚಲನ ಮೂಡಿಸಿದೆ. ಮಗು ಮತ್ತು ಬಾಲಕಿಯನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಸ್ಥಿತಿ ಸುಧಾರಿಸಿದ ಬಳಿಕ ಬಾಲಕಿ ಯಾರಿಗೂ ತಿಳಿಸದೆ ಆಸ್ಪತ್ರೆಯಿಂದ ತೆರಳಿದ್ದಾಳೆ. ಬಾಲಕಿ ಆಸ್ಪತ್ರೆಯಲ್ಲಿ ಯಾವುದೇ ಹೆಸರು ಅಥವಾ ವಿಳಾಸ ನೋಂದಾಯಿಸಿಲ್ಲ. ಈ ಬಗ್ಗೆ ಸಂಬಂಧಪಟ್ಟ ಪೊಲೀಸ್ ಠಾಣೆಗೆ ಆಸ್ಪತ್ರೆಯಿಂದ ಮಾಹಿತಿ ನೀಡಲಾಗಿದೆ.
ಜಿಲ್ಲಾ ಆಸ್ಪತ್ರೆಯ ಸಿಎಂಎಸ್ ವೈದ್ಯೆ ವಿನೀತಾ ಅಗರ್ವಾಲ್ ನೀಡಿರುವ ಮಾಹಿತಿ ಪ್ರಕಾರ, ಮಾತನಾಡಿ, ಮೇ 30ರಂದು ಮಧ್ಯಾಹ್ನ 3.30ರ ಸುಮಾರಿಗೆ ಬಾಲಕಿ ಹೊಟ್ಟೆ ನೋವು ಎಂದು ಆಸ್ಪತ್ರೆಗೆ ಬಂದಿದ್ದಳು. ಆಕೆಯನ್ನು ಪರೀಕ್ಷೆಗಾಗಿ ಸ್ತ್ರೀರೋಗ ತಜ್ಞರ ಬಳಿಗೆ ಕಳುಹಿಸಲಾಯಿತು. ಈ ವೇಳೆ ಬಾಲಕಿಯ ನೋವು ಹೆಚ್ಚಾಗಿದ್ದು, ಬಳಿಕ ಶೌಚಾಲಯಕ್ಕೆ ತೆರಳಿದ್ದು, ಹೆರಿಗೆ ನೋವಿನ ಬಳಿಕ ಮಗುವಿಗೆ ಜನ್ಮ ನೀಡಿದ್ದಾಳೆ. ಬಾಲಕಿ ಎಲ್ಲವನ್ನೂ ಮರೆಮಾಚಲು ಯತ್ನಿಸಿದ್ದಳು. ಆದರೆ, ಮಗುವಿನ ಅಳುವ ಶಬ್ದದ ನಂತರ ಪಕ್ಕದ ಒಪಿಡಿ ವಾರ್ಡ್‌ನಲ್ಲಿದ್ದ ಮಹಿಳಾ ಭದ್ರತಾ ಸಿಬ್ಬಂದಿ ಮತ್ತು ಆರೋಗ್ಯ ಕಾರ್ಯಕರ್ತರು ಶೌಚಾಲಯಕ್ಕೆ ಧಾವಿಸಿ ತಾಯಿ ಮತ್ತು ಮಗುವನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ವೈದ್ಯರು ಇಬ್ಬರಿಗೂ ಚಿಕಿತ್ಸೆ ನೀಡಲು ಆರಂಭಿಸಿದ್ದು, ಪರಿಸ್ಥಿತಿ ಸುಧಾರಿಸಿದ ಬಳಿಕ ಇಬ್ಬರೂ ಆಸ್ಪತ್ರೆಯಿಂದ ನಿರ್ಗಮಿಸಿದ್ದಾರೆ. ಅವರು ಆಸ್ಪತ್ರೆಗೆ ಯಾವುದೇ ಮಾಹಿತಿ ನೀಡಿಲ್ಲ