ಸಮಗ್ರ ನ್ಯೂಸ್: ಕಾಶಿ ಗ್ಯಾನವಾಪಿ ಸೇರಿ ಇತರ ಮಸೀದಿಗಳ ಕುರಿತು ವಿವಾದ ಎದ್ದಿರುವ ನಡುವೆಯೇ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್)ದ ಮುಖ್ಯಸ್ಥ ಮೋಹನ್ ಭಾಗವತ್ ಅವರು ಅಚ್ಚರಿಯ ಹೇಳಿಕೆ ನೀಡಿದ್ದಾರೆ.
‘ಪ್ರತಿ ಮಸೀದಿಯಲ್ಲೂ ಶಿವಲಿಂಗ ಹುಡುಕುವ ಹಾಗೂ ವಿವಾದ ಸೃಷ್ಟಿಸುವ ಅಗತ್ಯವಿಲ್ಲ. ದಿನಕ್ಕೊಂದು ಮಸೀದಿ ವಿವಾದ ಸೃಷ್ಟಿಸಬೇಕಿಲ್ಲ. ಮುಸ್ಲಿಮರೇನು ಹೊರಗಿನವರಲ್ಲ. ಅವರೂ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿದ್ದಾರೆ’ ಎಂದು ಹೇಳಿದ್ದಾರೆ. ಇದೇ ವೇಳೆ, ಅಯೋಧ್ಯೆ ರಾಮಮಂದಿರ ಹೋರಾಟದಲ್ಲಿ ಆರೆಸ್ಸೆಸ್ ಪಾಲ್ಗೊಂಡಿತ್ತು ನಿಜ. ಇನ್ನು ಮುಂದೆ ಇಂತಹ ಹೋರಾಟದಲ್ಲಿ ಭಾಗಿಯಲ್ಲ ಎಂದಿದ್ದಾರೆ.
ಅಲ್ಲದೆ, ‘ಗ್ಯಾನವಾಪಿ ಮಸೀದಿ ವಿವಾದವನ್ನು ಹಿಂದೂ ಹಾಗೂ ಮುಸ್ಲಿಂ ಪಂಗಡಗಳು ಮಾತುಕತೆ ಮೂಲಕ ಇತ್ಯರ್ಥಪಡಿಸಿಕೊಳ್ಳಬೇಕು. ಇಲ್ಲವೇ ಕೋರ್ಚ್ ಆದೇಶ ಪಾಲಿಸಬೇಕು’ ಎಂದಿದ್ದಾರೆ. ದೇಶಾದ್ಯಂತ ಈಗ ಮಂದಿರ-ಮಸೀದಿ ವಿವಾದ ಸೃಷ್ಟಿಆಗಿರುವ ನಡುವೆಯೇ ಸಂಘದ ಮುಖ್ಯಸ್ಥರ ಈ ಹೇಳಿಕೆ ಭಾರಿ ಮಹತ್ವ ಪಡೆದಿದೆ.