Ad Widget .

ಮಂಗಳೂರು : ಹಿಜಾಬ್ ಕುರಿತ ಸುಳ್ಳು ಪ್ರಕರಣ ದಾಖಲು ಆರೋಪಿಸಿ ಪೊಲೀಸರ ವಿರುದ್ದ ಪತ್ರಕರ್ತರಿಂದ ಪ್ರತಿಭಟನೆ

ಸಮಗ್ರ ನ್ಯೂಸ್: ಉಪ್ಪಿನಂಗಡಿ ಹಿಜಾಬ್ ಪ್ರಕರಣ ವರದಿ ಮಾಡಲು ತೆರಳಿದ್ದ ಪತ್ರಕರ್ತರ ಮೇಲೆ ಸುಳ್ಳು ಕೇಸ್ ದಾಖಲಿಸಲಾಗಿದೆ ಎಂದು ಆರೋಪಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರು ಶನಿವಾರ ನಗರದ ಕ್ಲಾಕ್ ಟವರ್ ಮುಂದೆ ಪ್ರತಿಭಟನೆ ನಡೆಸಿದರು.

Ad Widget . Ad Widget .

ಎಸ್ಪಿ ಕಚೇರಿ ವರೆಗೆ ಮೆರವಣಿಗೆಯಲ್ಲಿ ಸಾಗಿದ ಪತ್ರಕರ್ತರು, ನ್ಯಾಯ ನೀಡುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿ ಕಾರಿ ಋಷಿಕೇಶ್ ಸೋನಾವಣೆ ಮೂಲಕ ಗೃಹಸಚಿವರಿಗೆ ಮನವಿ ಸಲ್ಲಿಸಿದರು.

Ad Widget . Ad Widget .

ಪ್ರತಿಭಟನೆ ನಿರತರನ್ನು ಉದ್ದೇಶಿಸಿ ಮಾತನಾಡಿದ ನಿಕಟಪೂರ್ವ ಅಧ್ಯಕ್ಷ ಪಿ.ಬಿ.ಹರೀಶ್ ರೈ, ಉಪ್ಪಿನಂಗಡಿ ಠಾಣಾಧಿಕಾರಿ ಎಚ್ಚೆತ್ತುಕೊಂಡು, ಕರ್ತವ್ಯ ನಿರ್ವಹಿಸಿದ್ದರೆ ಪತ್ರಕರ್ತರ ಮೇಲೆ ಹಲ್ಲೆಯೇ ನಡೆಯುತ್ತಿರಲಿಲ್ಲ. ಪತ್ರಕರ್ತರು ನ್ಯಾಯಕ್ಕಾಗಿ ಮನವಿ ನೀಡಿದ ಬಳಿಕವೂ ಪತ್ರಕರ್ತರ ವಿರುದ್ಧ ಸುಳ್ಳು ಕೇಸು ದಾಖಲಿಸಿ, ಎಫ್‌ಐಆರ್ ಪ್ರತಿಯನ್ನು ಸಾಮಾಜಿಕ ಜಾಲತಾಣಗಳ ಮೂಲಕ ಹರಿಯ ಬಿಡಲಾಗಿದೆ. ಇದು ಖಂಡನೀಯ ಎಂದರು.

ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಮಾತನಾಡಿ, ಸುಳ್ಳು ದೂರಿಗೆ ತಕ್ಷಣ ಬಿ ರಿಪೋರ್ಟ್ ಹಾಕಬೇಕು. ಘಟನಾ ಸ್ಥಳದಲ್ಲಿದ್ದು ನಿರ್ಲಕ್ಷ್ಯ ತೋರಿದ ಪೊಲೀಸರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಪತ್ರಕರ್ತರಿಗೆ ಭದ್ರತೆ ಮತ್ತು ರಕ್ಷಣೆ ನೀಡಬೇಕು, ಇನ್ನು ಮುಂದೆ ರೀತಿಯ ಘಟನೆ ಮರುಕಳಿಸದಂತೆ ಎಚ್ಚರ ವಹಿಸಬೇಕು ಎಂದು ಸರಕಾರಕ್ಕೆ ಒತ್ತಾಯಿಸಿದರು.

Leave a Comment

Your email address will not be published. Required fields are marked *