ಗುಂಡ್ಯ: ಸೇತುವೆಗೆ ಯಾತ್ರಾರ್ಥಿಗಳ ಕಾರು ಢಿಕ್ಕಿ- ಓರ್ವ ಸಾವು

ಸಮಗ್ರ ನ್ಯೂಸ್: ಸುಬ್ರಹ್ಮಣ್ಯ – ಗುಂಡ್ಯ ರಾಜ್ಯ ಹೆದ್ದಾರಿಯ ಚೇರು ಎಂಬಲ್ಲಿ ಕಾರೊಂದು ಕಿರು ಸೇತುವೆಯ ತಡೆಗೋಡೆಗೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡ ಘಟನೆ ಸೋಮವಾರದಂದು ನಡೆದಿದೆ.

Ad Widget ... ..

ರಾಮನಗರದಿಂದ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಯಾತ್ರಾರ್ಥಿಗಳಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಿರು ಸೇತುವೆಯ ತಡೆಗೋಡೆಗೆ ಢಿಕ್ಕಿ ಹೊಡೆದಿದ್ದು, ಘಟನೆಯಲ್ಲಿ ಕಾರಿನಲ್ಲಿದ್ದ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನುಳಿದಂತೆ ಇಬ್ಬರು ಗಂಭೀರ ಗಾಯಗೊಂಡಿದ್ದು, ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಮೃತದೇಹವನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರದ ಶವಾಗಾರದಲ್ಲಿ ಇರಿಸಲಾಗಿದೆ. ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Ad Widget

Leave a Comment

Your email address will not be published. Required fields are marked *