Ad Widget .

ಬೆಂಗಳೂರು: ಹೆಚ್ಚುತ್ತಿರುವ ಕೋವಿಡ್ ಸೋಂಕು; ಕಡ್ಡಾಯ ಮಾಸ್ಕ್ ಜಾರಿಗೆ ಸೂಚಿಸಿದ ಸಲಹಾ ಸಮಿತಿ

ಸಮಗ್ರ ನ್ಯೂಸ್ : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯ ನಿಯಮಗಳನ್ನು ಪರಿಣಾಮಕಾರಿ ಜಾರಿಗೊಳಿಸಲು ಕೊರೊನಾ ತಾಂತ್ರಿಕ ಸಲಹಾ ಸಮಿತಿ ಸೂಚನೆ ನೀಡಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ರಾಜ್ಯದಲ್ಲಿ ಕೊರೊನಾ ಸೋಂಕು ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯು ಕೊರೊನಾ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಸಿದ್ದು, ಸಭೆಯಲ್ಲಿ ತಜ್ಞರು, ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿದ್ದು, ರಾಜ್ಯದಲ್ಲಿ ಸಾರ್ವಜನಿಕರು ಮಾಸ್ಕ್ ಕಡ್ಡಾಯ ನಿಯಮಗಳನ್ನು ಸಮರ್ಪಕವಾಗಿ ಪಾಲಿಸುವಂತೆ ಸೂಚನೆ ನೀಡಿದೆ.

Ad Widget . Ad Widget . Ad Widget .

ಕೇಂದ್ರ ಸರ್ಕಾರ ಸೂಚಿಸಿರುವಂತೆ ರಾಜ್ಯದಲ್ಲಿ ನಿತ್ಯ ಕಡ್ಡಾಯವಾಗಿ 30 ಸಾವಿರ ಮಂದಿಯ ಸೋಂಕು ಪರೀಕ್ಷೆ ನಡೆಸಬೇಕು. ಜೊತೆಗೆ ಹೊಸ ರೂಪಾಂತರಿಗಳ ಪತ್ತೆ ನಿಟ್ಟಿನಲ್ಲಿ ಕೈಗೊಳ್ಳುತ್ತಿರುವ ವಂಶವಾಹಿ ಪರೀಕ್ಷೆಗಳನ್ನು ಕೈಗೊಳ್ಳುವಂತೆ ಆರೋಗ್ಯ ಇಲಾಖೆಗೆ ಕೊರೊನಾ ತಾಂತ್ರಿಕ ಸಲಹಾ ಸಮಿತಿ ತಿಳಿಸಿದೆ.

ಇನ್ನು ಕೊರೊನಾ ವೈರಸ್ ಏರಿಕೆಯಾಗುತ್ತಿದ್ದು, ಸಾರ್ವಜನಿಕರು ಕೊರೊನಾ ಸೋಂಕಿನ ಮೂರನೇ ಡೋಸ್ ಲಸಿಕೆ ಪಡೆಯಬೇಕು. 2 ಡೋಸ್ ಪಡೆದವರು 3 ನೇ ಡೋಸ್ ಲಸಿಕೆ ಪಡೆಯಬೇಕು ಎಂದು ತಾಂತ್ರಿಕ ಸಲಹಾ ಸಮಿತಿ ಹೇಳಿದೆ.

Leave a Comment

Your email address will not be published. Required fields are marked *