ಸಮಗ್ರ ನ್ಯೂಸ್: ದ್ವಿತೀಯ ಪಿಯುಸಿ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯಿಂದ ರೋಹಿತ್ ಚಕ್ರತೀರ್ಥ ಅವರನ್ನು ಶಿಕ್ಷಣ ಇಲಾಖೆ ಕೈಬಿಟ್ಟಿದೆ.
ಪಠ್ಯ ಪರಿಷ್ಕರಣೆಗೆ ರೋಹಿತ್ ಚಕ್ರತೀರ್ಥ ಅವರನ್ನು ಈ ಮೊದಲು ಸರ್ಕಾರವು ನೇಮಿಸಿತ್ತು. ಆದರೆ ಸಾಲು ಸಾಲು ವಿವಾದಗಳು ಎದುರಾಗಿತ್ತು. ಇದೀಗ ರೋಹಿತ್ ಚಕ್ರತೀರ್ಥ ಅವರನ್ನು ಕೈಬಿಡಲು ಸರ್ಕಾರ ನಿರ್ಧರಿಸಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.
ದ್ವಿತೀಯ ಪಿಯುಸಿಯಲ್ಲಿ ಅಧ್ಯಾಯ 4.2ರ ಹೊಸ ಧರ್ಮಗಳ ಉದಯ ಪಠ್ಯಭಾಗದ ಪರಿಷ್ಕರಣೆ ಈ ಮೊದಲು ಸರ್ಕಾರ ಮುಂದಾಗಿತ್ತು. ಪಠ್ಯ ಪರಿಷ್ಕರಣೆ ಜವಾಬ್ದಾರಿಯನ್ನು ರೋಹಿತ್ ಚಕ್ರತೀರ್ಥ ಅವರಿಗೆ ವಹಿಸಲಾಗಿತ್ತು. ಶಾಲೆಗಳ ಪಠ್ಯದ ಪರಿಷ್ಕರಣೆ ವಿವಾದ ಹಿನ್ನಲೆಯಲ್ಲಿ ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿಯನ್ನು ಕೈಬಿಡಲು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮುಂದಾಗಿದ್ದಾರೆ. ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿಯನ್ನು ವಿಸರ್ಜಿಸಿರುವ ಕಾರಣ, ಪಿಯುಸಿ ಪಠ್ಯಪುಸ್ತಕ ಪರಿಷ್ಕರಣೆಯ ವರದಿಯನ್ನು ಪಡೆಯುವುದಿಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.