ಸಮಗ್ರ ನ್ಯೂಸ್: ಕೊರೊನಾ ಕಾರಣದಿಂದ 2 ವರ್ಷಗಳಿಂದ ಸರಿಯಾಗಿ ನಡೆಯದಿದ್ದ ಪ್ರಥಮ ಹಾಗೂ ದ್ವಿತೀಯ ಪಿಯುಸಿ ಭೌತಿಕ ತರಗತಿಗಳು ಜೂನ್ 9 ರ ಇಂದಿನಿಂಧ ಪೂರ್ಣ ಪ್ರಮಾಣದಲ್ಲಿ ಅರಂಭವಾಗಲಿದೆ.
ಪ್ರಥಮ ಮತ್ತು ದ್ವಿತೀಯ ಪಿಯುಸಿ 2022-23 ನೇ ಸಾಲಿನ ತರಗತಿಗಳು ಆರಂಭವಾಗಲಿದ್ದು, ತರಗತಿ ಆರಂಭಕ್ಕೆ ಪದವಿಪೂರ್ವ ಶಿಕ್ಷಣ ಇಲಾಖೆ ಸಿದ್ಧತೆ ಮಾಡಿಕೊಂಡಿದೆ.
ಕೊರೊನಾ ವೈರಸ್ ಕಾರಣದಿಂದ ಕಳೆದ 2 ವರ್ಷಗಳಿಂದ ಸರಿಯಾಗಿ ತರಗತಿಗಳು ನಡೆದಿಲ್ಲ. ಈ ಬಾರಿ 2022-23 ನೇ ಸಾಲಿನ ಪ್ರಥಮ ಹಾಗೂ ದ್ವಿತೀಯ ಪಿಯುಸಿ ತರಗತಿಗಳು ಆರಂಭವಾಗಲಿವೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ತಿಳಿಸಿದೆ.
ಪದವಿ ಪೂರ್ವ ಶಿಕ್ಷಣ ಇಲಾಖೆಯು ಕೊರೊನಾ ನಿಯಂತ್ರಣದಲ್ಲಿ ಇರುವುದರಿಂದ ಕಾಲೇಜು ಪ್ರಾರಂಭಕ್ಕೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಈಗಾಗಲೇ ಕಾಲೇಜು ಪ್ರಾರಂಭಕ್ಕೆ ಪಿಯುಸಿ ಬೋರ್ಡ್ ಮಾರ್ಗಸೂಚಿ ಮತ್ತು ವೇಳಾಪಟ್ಟಿ ಪ್ರಕಟ ಮಾಡಿದೆ. ನಾಳೆಯಿಂದ ಪಿಯು ಕಾಲೇಜುಗಳಲ್ಲಿ ಕಡ್ಡಾಯವಾಗಿ ಸಮವಸ್ತ್ರ ಧರಿಸಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಿದೆ. ಈ ವರ್ಷದಿಂದ ಕಡ್ಡಾಯವಾಗಿ ಸಮವಸ್ತ್ರ ನಿಯಮ ಪಾಲನೆ ಮಾಡಬೇಕು ಎಂದು ಆದೇಶ ಹೊರಡಿಸಿದೆ.
ಹೈಕೋರ್ಟ್ ತೀರ್ಪಿನ ಅನ್ವಯ ಸಮವಸ್ತ್ರ ಧರಿಸುವಂತೆ ಮಾರ್ಗಸೂಚಿಯಲ್ಲಿ ಶಿಕ್ಷಣ ಇಲಾಖೆ ಉಲ್ಲೇಖ ಮಾಡಿದೆ.