ಹೆಂಡತಿಗೆ ಕೈಕೊಟ್ಟು ಮತ್ತೊಬ್ಬಳೊಂದಿಗೆ ಪೊಲೀಸಪ್ಪನ ಚಕ್ಕಂದ

ಸಮಗ್ರ ನ್ಯೂಸ್: ವಿವಾಹೇತರ ಸಂಬಂಧ ಪ್ರಶ್ನಿಸಿ ಸಬ್ ಇನ್ಸ್‌ಪೆಕ್ಟರ್ ವಿರುದ್ಧ ಪತ್ನಿಯೇ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಹೊಸಕೋಟೆ ತಾಲೂಕಿನ ಸೂಲಿಬೆಲೆ ಪೊಲೀಸ್ ಠಾಣೆ ಸಬ್ ಇನ್ಸ್‌ಪೆಕ್ಟರ್ ರಮೇಶ್ ವಿರುದ್ಧ ಅವರ ಪತ್ನಿ ದೂರು ನೀಡಿದ್ದು, ನಕಲಿ ಪೋಷಕರನ್ನು ಸೃಷ್ಟಿಸಿ ತನ್ನನ್ನು ಮದುವೆಯಾಗಿದ್ದಾರೆ ಎಂದು ಆರೋಪಿಸಿದ್ದಾರೆ.

. Ad Widget . Ad Widget

ತಮಗೆ ಅನ್ಯಾಯವಾಗಿದ್ದು, ನ್ಯಾಯ ಕೊಡಿಸಿ ಎಂದು ಪಿಎಸ್​ಐ ರಮೇಶ್ ಕೆಲಸ ಮಾಡುತ್ತಿದ್ದ ಸೂಲಿಬೆಲೆ ಪೊಲೀಸ್ ಠಾಣೆಯಲ್ಲಿಯೇ ದೂರು ನೀಡಿದ್ದು, ಎಫ್‍ಐಆರ್ ದಾಖಲಾಗಿದೆ. ಅಲ್ಲದೆ, ರಮೇಶ್‍ಗೆ ಬೇರೆ, ಬೇರೆ ವಿವಾಹೇತರ ಸಂಬಂಧಗಳಿವೆ. ಈ ಬಗ್ಗೆ ಅವರ ಮೊಬೈಲ್‍ನಲ್ಲಿ ಅಶ್ಲೀಲ ವಿಡಿಯೋ, ಅರೆಬೆತ್ತಲೆ ಫೋಟೋಗಳು, ಮಾಟ ಮಂತ್ರದಂತಹ ಫೋಟೋಗಳಿದ್ದು, ಕೆಲ ವಿಡಿಯೋಗಳು ವೈರಲ್ ಆಗಿವೆ ಎಂದು ದೂರಿದ್ದಾರೆ.

. Ad Widget . . Ad Widget . Ad Widget

ವಿವಾಹೇತರ ಸಂಬಂಧ ಪ್ರಶ್ನೆ ಮಾಡಿದ್ದಕ್ಕೆ ನನ್ನ ಮೇಲೆ ಹಲ್ಲೆ ಮಾಡಿದ್ದಾರೆ. ಬೇರೆ, ಬೇರೆ ಯುವತಿಯರನ್ನು ಮದುವೆಯಾಗಿದ್ದಾರೆ. ವಿವಾಹೇತರ ಸಂಬಂಧದ ಬಗ್ಗೆ ಪ್ರಶ್ನೆ ಮಾಡಿದ್ದಕ್ಕೆ ನನ್ನ ಮೇಲೆ ಹಲ್ಲೆ ಮಾಡಿದ್ದಾರೆ. ತನಗೆ ಪತಿಯಿಂದಲೇ ಮಾನಸಿಕ ಕಿರುಕುಳವಾಗುತ್ತಿದ್ದು, ನ್ಯಾಯ ಕೊಡಿಸಬೇಕು ಎಂದು ದೂರಿನಲ್ಲಿ ತಿಳಿಸಿದ್ದಾರೆ.

Leave a Comment

Your email address will not be published. Required fields are marked *