Ad Widget .

ಸಾವರ್ಕರ್ ಫೋಟೋ ತೆರವು ವಿಚಾರ| ಮಂಗಳೂರು ವಿವಿ ಕಾಲೇಜಿನಲ್ಲಿ ಇತ್ತಂಡಗಳ ನಡುವೆ ಘರ್ಷಣೆ|

ಸಮಗ್ರ ನ್ಯೂಸ್: ತರಗತಿಯಲ್ಲಿ ಸಾವರ್ಕರ್‌ ಫೋಟೋ ಹಾಕಿರುವ ವಿಚಾರಕ್ಕೆ ಸಂಬಂಧಿಸಿ ಮಂಗಳೂರು ವಿವಿ ಘಟಕ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಎರಡು ಗುಂಪುಗಳು ಪರಸ್ಪರ ಹಲ್ಲೆ ನಡೆಸಿದ ಘಟನೆ ಶುಕ್ರವಾರ ನಡೆದಿದೆ.

Ad Widget . Ad Widget .

ಮಧ್ಯಾಹ್ನ ಭೋಜನ ವಿರಾಮದ ವೇಳೆ ಈ ಘಟನೆ ನಡೆದಿದ್ದು, ಲಭ್ಯ ಮಾಹಿತಿಯಂತೆ ಕೆಲವು ವಿದ್ಯಾರ್ಥಿಗಳು ಕೆಲ ದಿನ ಹಿಂದೆ ತರಗತಿಯಲ್ಲಿ ಸಾವರ್ಕರ್ ಫೊಟೊ ಹಾಕಿದ್ದನ್ನು ಆಕ್ಷೇಪಿಸಿದ್ದಾರೆ.

Ad Widget . Ad Widget .

ಇಂದು ಈ ವಿಚಾರವಾಗಿ ಎರಡು ಗುಂಪಿನ ವಿದ್ಯಾರ್ಥಿಗಳ ನಡುವೆ ಮಾತಿಗೆ ಮಾತು ಬೆಳೆದಿದ್ದು ಕೈ ಕೈ ಮಿಲಾಯಿಸಿಕೊಳ್ಳುವ ಹಂತಕ್ಕೆ ತಲುಪಿದೆ.

ಈ ವೇಳೆ ಕೆಲವು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಭೇಟಿ ನೀಡಿದ್ದಾರೆ.

Leave a Comment

Your email address will not be published. Required fields are marked *